ಪಾಕಿಸ್ತಾನದ ಸಮಾವೇಶವೊಂದರಲ್ಲಿ ಪ್ರಬಲ ಬಾಂಬ್ ಸ್ಪೋಟ; 43 ಮಂದಿ ಸಾವು, ನೂರಾರು ಮಂದಿಗೆ ಗಾಯ

ಪಾಕಿಸ್ತಾನ;ಕಾರ್ಯಕ್ರಮವೊಂದರಲ್ಲಿ ಬಾಂಬ್ ಸ್ಪೋಟ ಸಂಭವಿಸಿ 43 ಜನ ಸಾವನ್ನಪ್ಪಿರುವ ಘಟನೆ ಖೈಬರ್ ಪಂಕ್ತುನ್ವಾ ಪ್ರಾಂತ್ಯದ ಬಜೌರ್ ನಗರದಲ್ಲಿ ನಡೆದಿದೆ.

ಬಜೌರ್ ನಗರದಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಸಂಭವಿಸಿದ ಸ್ಪೋಟದಲ್ಲಿ 200 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಪೋಟದ ತೀವ್ರತೆಗೆ 43 ಮಂದಿ ಸಾವು ಕಂಡಿದ್ದು, ರಕ್ಷಣಾ ಕಾರ್ಯಚರಣೆ ನಡೆದಿದೆ.ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬಜೌರ್‌ನ ಖಾರ್‌ನಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್(ಜೆಯುಐ-ಎಫ್) ಕಾರ್ಯಕರ್ತರ ಸಮಾವೇಶದಲ್ಲಿ ಸ್ಫೋಟ ಸಂಭವಿಸಿದೆ.

JUI-F ಮುಖ್ಯಸ್ಥ ಮೌಲಾನಾ ಫಜ್ಲುರ್ ರೆಹಮಾನ್ ಅವರು ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಪ್ರಾಂತ್ಯದ ಉಸ್ತುವಾರಿ ಮುಖ್ಯಮಂತ್ರಿ ಅಜಮ್ ಖಾನ್ ಅವರನ್ನು ಒತ್ತಾಯಿಸಿದರು. ಪಕ್ಷದ ಕಾರ್ಯಕರ್ತರು ಆಸ್ಪತ್ರೆಗೆ ಆಗಮಿಸಿ ರಕ್ತದಾನ ಮಾಡುವಂತೆ ಮನವಿ ಮಾಡಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ