ಯುವಕನೋರ್ವ ಮನೆ ಸಮೀಪ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ;ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಅಬ್ಧುಲ್ ಸಲಾಂ ಆತ್ಮಹತ್ಯೆ?
ಕಾಸರಗೋಡು:ಯುವಕನೋರ್ವ ಮನೆ ಬಳಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪಳ್ಳತ್ತಡ್ಕದಲ್ಲಿ ನಡೆದಿದೆ.
ಕುಡ್ಪoಗುಯಿ ನಿವಾಸಿ ಅಬ್ದುಲ್ ಸಲಾಂ (27) ಮೃತಪಟ್ಟ ವರು.ಸಲಾಂ ನಿನ್ನೆ ನಾಪತ್ತೆಯಾಗಿದ್ದು ಹುಡುಕಾಟ ನಡೆಸಿದಾಗ
ಮನೆ ಸಮೀಪದ ಮರವೊಂದರಲ್ಲಿ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಬದಿಯಡ್ಕ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಸಲಾಂ, ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.