ನಿವೃತ್ತ ಉಪನ್ಯಾಸಕ ಹಾಗೂ ಖ್ಯಾತ ಚಿಂತಕ ಪ್ರೊ. ಹೆಚ್.ಪಟ್ಟಾಭಿರಾಮ ಸೋಮಯಾಜಿ ಇನ್ನಿಲ್ಲ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಉಪನ್ಯಾಸಕ ಹಾಗೂ ಖ್ಯಾತ ಚಿಂತಕ ಪ್ರೊ. ಹೆಚ್.ಪಟ್ಟಾಭಿರಾಮ ಸೋಮಯಾಜಿ ಅವರು ನಿಧನರಾಗಿದ್ದಾರೆ.

ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಎಚ್ ಪಟ್ಟಾಭಿರಾಮ ಸೋಮಯಾಜಿ ಅವರು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸುಮಾರು ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.ಅವರು ವಿದ್ಯಾರ್ಥಿಗಳಿಗೆ ಅಚ್ಚು ಮೆಚ್ಚಿನ ಪ್ರಾಧ್ಯಾಪಕರಾಗಿದ್ದರು.

ಪಟ್ಟಾಭಿರಾಮ ಸೋಮಯಾಜಿ ಅವರು ಕೋಮು ಸೌಹಾರ್ದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.

ಮಂಗಳೂರಿನಲ್ಲಿ ನಡೆದ ಪಬ್ ದಾಳಿಯ ನಂತರ ಅವರು ರಾಮಸೇನೆಯನ್ನು ‘ರಾವಣ ಸೇನೆ’ ಎಂದು ಕರೆದಿದ್ದು, ಈ ಹೇಳಿಕೆಯಿಂದ ನಗರದಲ್ಲಿ ಪ್ರತಿಭಟನೆಗಳು ಕೂಡ ನಡೆದಿದ್ದವು.

ಟಾಪ್ ನ್ಯೂಸ್