ಕಾರು- ಬಸ್ ನಡುವೆ ಭೀಕರ ಅಪಘಾತ, ಯುವಕ ಮೃತ್ಯು, ಇನ್ನೋರ್ವರು ಗಂಭೀರ

ಕಾಸರಗೋಡು;ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು,ಯುವತಿ ಗಾಯಗೊಂಡ ಘಟನೆ ಪೆರಿಯದಲ್ಲಿ ನಡೆದಿದೆ.

ಪೆರಿಯ ನಡುವೆಟ್ಟ ಪಾರೆಯ ವೈಶಾಕ್(30) ಮೃತರು.
ಘಟನೆಯಲ್ಲಿ ಕಾರಿನಲ್ಲಿದ್ದ ಆರತಿ (26) ಗಂಭೀರವಾಗಿ ಗಾಯಗೊಂಡಿದ್ದು,ಅವರನ್ನು ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಬಸ್ ನಲ್ಲಿದ್ದ ಹಲವರಿಗೆ ಕೂಡ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ವೈಶಾಖ್ ಪೆರಿಯದ ಇಂಟರ್ ಲಾಕ್ ಸಂಸ್ಥೆ ನಡೆಸುತ್ತಿದ್ದರು.ಆರತಿ ಕಾಸರಗೋಡು ಕಾಲೇಜಿನ ಮೂರನೇ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದರು.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com