ತೆಲಂಗಾಣ;ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ತೆಲಂಗಾಣದ ನಿಜಾಮಾಬಾದ್‌ನಲ್ಲಿ ಯುವಕರಿಗೆ ಕರಾಟೆ ತರಗತಿ ಕೊಟ್ಟ ವಿಚಾರವಾಗಿ ನಡೆದ ಬೆಳವಣಿಗೆಯಲ್ಲಿ ಇದೀಗ ಶಸ್ತ್ರಾಸ್ತ್ರ ತರಬೇತಿ ನೀಡಲು ಶಿಬಿರಗಳನ್ನು ನಡೆಸಿದೆ ಎಂದು ಗೃಹ ಸಚಿವಾಲಯ ಎನ್‌ಐಎ ತನಿಖೆಗೆ ಆದೇಶಿಸಿದೆ.
ಕರಾಟೆ ತರಬೇತಿ ಶಿಬಿರಗಳನ್ನು ನಡೆಸುವ ನೆಪದಲ್ಲಿ ಕರಾಟೆ ಪಟು ಅಮಾಯಕ ಯುವಕರನ್ನು ಪ್ರೇರೇಪಿಸಿ,ದಾಳಿ ಮಾಡುವಂತೆ ಬ್ರೈನ್ ವಾಶ್ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.
ಕರಾಟೆ ಬೋಧಕ ಅಬ್ದುಲ್ ಖಾದರ್ ಸೇರಿದಂತೆ ಪಿಎಫ್‌ಐ ಜೊತೆ ಸಂಪರ್ಕ ಹೊಂದಿರುವ 25 ಜನರ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಿರುವ ಬಗ್ಗೆ ಇಂಡಿಯಾ ಟುಡೆ ವರದಿ ಮಾಡಿದೆ.
ಮೂಲಗಳ ಪ್ರಕಾರ ಖಾದರ್ ಕನಿಷ್ಠ 200 ಮಂದಿಗೆ ಕರಾಟೆ ತರಗತಿಗಳ ನೆಪದಲ್ಲಿ ಶಸ್ತ್ರಾಸ್ತ್ರಗಳ ತರಬೇತಿ ನೀಡಿದ್ದರು ಎಂದು ಆರೋಪಿಸಲಾಗಿದೆ.
ಎಲ್ಲಾ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೊಲೀಸ್ ವರದಿಯಲ್ಲಿ ಬಂಧಿತರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.ಈ ಶಸ್ತ್ರಾಸ್ತ್ರಗಳನ್ನು ಮುಸ್ಲಿಂ ಯುವಕರಿಗೆ ತರಬೇತಿ ನೀಡಲು ಬಳಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.