ಎಸೆಸೆಲ್ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು

ಎಸೆಸೆಲ್ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು

ಚಾಮರಾಜನಗರ:ಎಸ್ಎಸ್ ಎಲ್ ಸಿ ವಿದ್ಯಾರ್ಥಿನಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಪಟ್ಟಣದ ಅನಾಥಾಲಯದಲ್ಲಿ ನಡೆದಿದೆ.

ವಿದ್ಯಾರ್ಥಿನಿ ಫಿಲಿಶ್(15)ಮೃತ ದುರ್ದೈವಿ.ಪಟ್ಟಣದ ನಿರ್ಮಲ ಕಾನ್ವೆಂಟ್ ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುವಾಗ ಫಿಲಿಸಾ ಏಕಾಏಕಿ ಕುಸಿದುಬಿದ್ದಿದ್ದಾಳೆ.ಕೂಡಲೇ ಶಾಲಾ ಸಿಬ್ಬಂದಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಈ ವೇಳೆ ಫಿಲಿಶ್ ಮೃತಪಟ್ಟಿದ್ದಾರೆ.

ಫಿಲಿಶ್ ಬೆಂಗಳೂರಿನ ನಿವಾಸಿಯಾಗಿದ್ದು,ಹೆತ್ತವರ ನಿಧನದ ಬಳಿಕ ಐದು ವರ್ಷಗಳ ಹಿಂದೆ ಸಿಎಂಎಸ್ ಅನಾಥಾಲಯಕ್ಕೆ ಇವರು ಸೇರ್ಪಡೆಗೊಂಡಿದ್ದರು ಎಂದು ನಿಲಯ ಪಾಲಕರಾದ ಸೆಲ್ವರಾಜ್ ಮಾಹಿತಿ ನೀಡಿದ್ದಾರೆ.

ಬಾಲಕಿ ಆರೋಗ್ಯವಾಗಿದ್ದು ಧಿಡೀರ್ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್