‘ಅನುಮಾನಾಸ್ಪದ ಮೌನ ಮೊಸಕ್ಕೆ ಸಮಾನ’- ಯುಸಿಸಿ ಬಗ್ಗೆ ಕಾಂಗ್ರೆಸ್ ನ ನಿಲುವು ಪ್ರಶ್ನಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್

ಕೇರಳ;ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತು ಕಾನೂನು ಆಯೋಗವು ಜನರು ಮತ್ತು ಧಾರ್ಮಿಕ ಸಂಸ್ಥೆಗಳಿಂದ ಅನಿಸಿಕೆಗಳನ್ನು ಕೋರಿದೆ.

ಇದರ ಬೆನ್ನಲ್ಲೇ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇಂದು ಯುಸಿಸಿ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಕಾಂಗ್ರೆಸ್‌ಗೆ ಆಗ್ರಹಿಸಿದ್ದಾರೆ.

ಪಕ್ಷದ ಅನುಮಾನಾಸ್ಪದ ಮೌನ ಮೊಸಕ್ಕೆ ಸಮಾನ ಎಂದು ಸಿಎಂ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಕಾಂಗ್ರೆಸ್ ಸ್ಪಷ್ಟ ನಿಲುವು ಹೊಂದಿದೆಯೇ? ಭಾರತದ ಬಹುತ್ವದ ಮೇಲಿನ ಸಂಘಪರಿವಾರದ (ಆರ್‌ಎಸ್‌ಎಸ್) ದಾಳಿಯನ್ನು ವಿರೋಧಿಸುವುದು ಇಂದಿನ ಅಗತ್ಯವಾಗಿರುವಾಗ, ಅವುಗಳ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳಲು ಕಾಂಗ್ರೆಸ್ ಸಿದ್ಧವಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು