ಕೊಡಗು;ತಲೆ ತಿರುಗಿ ಮರದಿಂದ ಬಿದ್ದು ಪೊಲೀಸ್ ಪೇದೆ ದುರ್ಮರಣ

ಕೊಡಗು;ಮರದಿಂದ ಕೆಳಗೆ ಬಿದ್ದು ಪೊಲೀಸ್​ ಸಿಬ್ಬಂದಿ ಮೃತಪಟ್ಟ ಘಟನೆ ಕುಶಾಲನಗರ ತಾಲೂಕಿನ ಕಾನ್​ ಬೈಲ್​ ಗ್ರಾಮದಲ್ಲಿ ನಡೆದಿದೆ.

ಲೋಕೇಶ್ (40) ಮೃತ ದುರ್ದೈವಿ.

ಲೋಕೇಶ್ ಮಾವಿನ ಮರ ಕಸಿಮಾಡಲು ಮರ ಏರಿದ್ದ ಸಮಯದಲ್ಲಿ ಬಿಪಿ ಕಡಿಮೆಯಾಗಿ, ತಲೆ ತಿರುಗಿ ಮರದಿಂದ ಕಾಂಕ್ರೀಟ್ ರೋಡ್​ಗೆ ಬಿದ್ದ ಪರಿಣಾಮ ಲೋಕೇಶ್​ ಮೃತಪಟ್ಟಿದ್ದಾರೆ.

ಲೋಕೇಶ್​ ಅವರು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರಿಗೆ 10 ವಷ೯ಗಳಿಂದ ಗನ್ ಮ್ಯಾನ್ ಆಗಿ ಕೆಲಸ ಮಾಡಿದ್ದರು ಎನ್ನಲಾಗಿದೆ.

ಲೋಕೇಶ್ ಮೃತದೇಹವನ್ನು ಮಡಿಕೇರಿ ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ‌.

ಟಾಪ್ ನ್ಯೂಸ್