ನವದೆಹಲಿ;2021-22ನೇ ಸಾಲಿನಲ್ಲಿ ರಾಜಕೀಯ ಪಕ್ಷಗಳು ಪಡೆದುಕೊಂಡ ದೇಣಿಗೆಯ ಅಂಕಿ-ಅಂಶಗಳು ಬಹಿರಂಗವಾಗಿದ್ದು,ಬಿಜೆಪಿ ಅತ್ಯಧಿಕ ದೇಣಿಗೆ ಪಡೆದುಕೊಂಡಿದೆ.
ರಾಜಕೀಯ ಪಕ್ಷಗಳಿಗೆ ಬರೋಬ್ಬರಿ 3,289 ಕೋಟಿ ರೂಪಾಯಿ ದೇಣಿಗೆ ಹರಿದು ಬಂದಿದ್ದು, ಈ ಪೈಕಿ ಬಿಜೆಪಿ
ಮೊದಲ ಸ್ಥಾನದಲ್ಲಿದ್ದರೆ, ಟಿಎಂಸಿ ಎರಡನೇ ಸ್ಥಾನದಲ್ಲಿದೆ.
ಬಿಜೆಪಿ 1,917 ಕೋಟಿ ರೂಪಾಯಿ ದೇಣಿಗೆ ಪಡೆದುಕೊಂಡಿದೆ.ಎರಡನೇ ಸ್ಥಾನದಲ್ಲಿರುವ ತೃಣ ಮೂಲ ಕಾಂಗ್ರೆಸ್ ಪಕ್ಷ 545.745 ಕೋಟಿ ರೂಪಾಯಿ ಪಡೆದುಕೊಂಡಿದೆ. ಕಾಂಗ್ರೆಸ್ ಪಕ್ಷ 541.275 ಕೋಟಿ ರೂಪಾಯಿಗಳನ್ನು ಪಡೆದುಕೊಂಡಿದೆ.
ಚುನಾವಣಾ ಆಯೋಗಕ್ಕೆ ರಾಜಕೀಯ ಪಕ್ಷಗಳು ಸಲ್ಲಿಸಿರುವ ದಾಖಲೆಗಳ ಆಧಾರದಲ್ಲಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಈ ವರದಿಯನ್ನು ಬಿಡುಗಡೆ ಮಾಡಿದೆ.