ಬಿಜೆಪಿಗೆ ಬಟನ್ ಒತ್ತಿ ವೃದ್ಧೆಯ ಕೈಗೆ ಸಿಕ್ಕಿಬಿದ್ದ ಮತಗಟ್ಟೆ ಅಧಿಕಾರಿ;ಏನಿದು ಆಘಾತಕಾರಿ ಘಟನೆ? ಡಿಟೇಲ್ಸ್..

ಕಲಬುರಗಿ;ಚುನಾವಣಾ ಅಧಿಕಾರಿಯೊಬ್ಬರು ವೃದ್ಧ ಮಹಿಳೆಗೆ ವಂಚಿಸಿ ಬಿಜೆಪಿ ಪರ ಬಟನ್ ಒತ್ತಿದ ಆರೋಪದ ಮೇರೆಗೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಕೊನೆಗೆ ಮತದಾರರ ಮೇಲೆ ಪ್ರಭಾವ ಬೀರಲು ಯತ್ನಿಸಿದ ಆರೋಪದ ಮೇರೆಗೆ ಅಧಿಕಾರಿಯನ್ನು ಬದಲಾಯಿಸಲಾಗಿದೆ ಎಂದು ಹೇಳಲಾಗಿದೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಚಾಮನೂರು ಗ್ರಾಮದಲ್ಲಿ ಚುನಾವಣಾ ಅಧಿಕಾರಿ ಬಿ.ಸಿ. ಚವ್ಹಾಣ ಎಂಬವರ ಮೇಲೆ ಈ ಆರೋಪ ಕೇಳಿ ಬಂದಿದೆ.

ಬಸಮ್ಮ ಎಂಟುಮನ್ ಎಂಬ ಮಹಿಳೆ ಮತಗಟ್ಟೆಗೆ ಹೋಗಿ ಕಾಂಗ್ರೆಸ್ ಅಭ್ಯರ್ಥಿಯ ಚಿಹ್ನೆಗೆ ಬಟನ್ ಒತ್ತಲು ತಿಳಿಸಿದ್ದಾರೆ. ಆದರೆ ಚುನಾವಣಾಧಿಕಾರಿ ಬಿಜೆಪಿ ಅಭ್ಯರ್ಥಿಯ ಮುಂದಿರುವ ಬಟನ್ ಒತ್ತಿದ್ದಾರೆ. ಅದು ಮಹಿಳೆ ಗಮನಕ್ಕೆ ಬಂದು ಆಕ್ಷೇಪ ವ್ಯಕ್ತಪಡಿಸಿದಾಗ ಘಟನೆ ಬಯಲಿಗೆ ಬಂದಿದೆ.

ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ನಂತರ ಚಿತ್ತಾಪುರ ಚುನಾವಣಾಧಿಕಾರಿ ನವೀನ್ ಕುಮಾರ್ ಯು. ಅಧಿಕಾರಿಯನ್ನು ಬದಲಾಯಿಸಿದ್ದಾರೆ.

ಇದೇ ವಿಚಾರವಾಗಿ ಟ್ವೀಟ್ ಕೂಡ ಮಾಡಿರುವ ಪ್ರಿಯಾಂಕ್ ಖರ್ಗೆ, ಮತಗಟ್ಟೆ ಅಧಿಕಾರಿ ಬಿಜೆಪಿ ಪರ ಮತದಾರರನ್ನು ಸೆಳೆಯಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಸ್ತುತ ಆರೋಪಿ ಅಧಿಕಾರಿಯನ್ನು ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com