ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ; ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಪೋಸ್ಟ್ ಮ್ಯಾನ್, ಮೇಲ್ ಗಾರ್ಡ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇಂಡಿಯಾ ಪೋಸ್ಟ್ ತನ್ನ ಅಧಿಕೃತ ವೆಬ್ ಪೋರ್ಟಲ್ ನಲ್ಲಿ ಈ ಘೋಷಣೆ ಮಾಡಿದ್ದು, ಒಟ್ಟು 98083 ಪೋಸ್ಟ್ ಮ್ಯಾನ್ 59099 ಮತ್ತು ಮೇಲ್ ಗಾರ್ಡ್ 1445 ಹುದ್ದೆಗಳು ಖಾಲಿ ಇವೆ. ಇನ್ನು ಮಲ್ಟಿ ಟಾಸ್ಕಿಂಗ್ ಹುದ್ದೆಗಳಿಗೆ 23 ವಲಯಗಳಲ್ಲಿ ಒಟ್ಟು 37539 ಹುದ್ದೆಗಳು ಖಾಲಿ ಇವೆ.

ಅರ್ಹತೆ:10ನೇ ತರಗತಿ, 12ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇನ್ನು ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳನ್ನ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಅಧಿಕೃತ ವೆಬ್ಸೈಟ್ ಮೂಲಕ ಮಾತ್ರ ನೀವು ಈ ನೇಮಕಾತಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.ಗರಿಷ್ಠ ವಯೋಮಿತಿಯನ್ನು 32 ವರ್ಷಗಳಿಗೆ ನಿಗದಿಪಡಿಸಲಾಗಿದೆ.

ಟಾಪ್ ನ್ಯೂಸ್