ಉಡುಪಿ; ತಾಯಿ ಮಕ್ಕಳ ಕೊಲೆ ಪ್ರಕರಣ; ಆರೋಪಿಯ ನ್ಯಾಯಾಂಗ ಬಂಧನ ವಿಸ್ತರಣೆ

ಉಡುಪಿ: ನೇಜಾರಿನಲ್ಲಿ ತಾಯಿ ಮಕ್ಕಳನ್ನು ಹತ್ಯೆಗೈದಿದ್ದ ಆರೋಪಿ ಪ್ರವೀಣ್ ಚೌಗುಲೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಉಡುಪಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಆರೋಪಿ ಪ್ರವೀಣ್ ಚೌಗಲೆಯನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಆರೋಪಿಗೆ ಡಿಸೆಂಬರ್ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರವೀಣ್ ಚೌಗುಲೆ ನವೆಂಬರ್ 12ರಂದು ನೇಜಾರಿನ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿದ್ದ. ಈ ಭೀಕರ ಘಟನೆ ರಾಜ್ಯದಲ್ಲಿ ಭಾರೀ ಸಂಚಲನವನ್ನೇ ಮೂಡಿಸಿತ್ತು.

ಟಾಪ್ ನ್ಯೂಸ್