ಧಾರವಾಡ:ಕೋಟೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್(36) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಗ್ರಾಮದ ಉಡಚಮ್ಮ ದೇವಿ ಜಾತ್ರೆ ವೇಳೆ ಕೆಲವರು ಕುಡಿದು ಜಗಳವಾಡುತ್ತಿದ್ದರು.ಆಗ ಗ್ರಾ.ಪಂ ಉಪಾಧ್ಯಕ್ಷ ಪ್ರವೀಣ್ ಕಮ್ಮಾರ ಜಗಳ ಬಿಡಿಸಿ ಕಳುಹಿಸಿದ್ದರು.ಸ್ವಲ್ಪ ಸಮಸಯದ ಬಳಿಕ ಬಂದ ಜಗಳ ಮಾಡಿದ ಮತ್ತೊಂದು ಗುಂಪು ಪ್ರವೀಣ್ಗೆ ಚಾಕುವಿನಿಂದ ಇರಿದಿದೆ. ತೀವ್ರ ಗಾಯಗೊಂಡಿದ್ದ ಪ್ರವೀಣ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಘಟನೆ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ದೂರಿನಲ್ಲಿ ತಿಳಿಸಿರುವ ಆರೋಪಿಗಳ ಪೈಕಿ ರಾಘವೇಂದ್ರ ಪಠಾತ್ ಸೇರಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.
ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ,ಕೋಟೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಹಾಗೂ ಜಿಲ್ಲಾ ಯುವಮೋರ್ಚಾ ಕಾರ್ಯಕಾರಣಿ ಸದಸ್ಯನಾಗಿ ಪಕ್ಷದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಪ್ರವೀಣ್ ಕಮ್ಮಾರ್ ಅವರ ಸಾವು ಮನಸ್ಸಿಗೆ ಆಘಾತ ಉಂಟುಮಾಡಿದೆ.
ನಮ್ಮ ಕಾರ್ಯಕರ್ತರ ಸಾವಿಗೆ ಕಾರಣವಾದ ಹಂತಕರನ್ನು ಸುಮ್ಮನೆ ಬಿಡುವ ಮಾತೇ ಇಲ್ಲ, ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ತೃಪ್ತಿ ಪಡುವ ಅತೃಪ್ತ ಆತ್ಮಗಳನ್ನು ಸಮಾಜದ ಮುಂದೆ ಬೆತ್ತಲಾಗಿಸುವ ಕಾಲ ಸನ್ನಿಹಿತವಾಗಿದೆ.
ವಿಷಯ ತಿಳಿದು ಎಸ್ ಡಿ ಎಂ ಆಸ್ಪತ್ರೆಗೆ ಧಾವಿಸಿ ಅಂತಿಮ ದರ್ಶನ ಪಡೆದೆನು. ಮೃತ ಪ್ರವೀಣನ ಆತ್ಮಕ್ಕೆ ಭಗವಂತನು ಸದ್ಗತಿ ಕರುಣಿಸಲಿ ಹಾಗೂ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.