ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ಓರ್ವ ಆರೋಪಿಗೆ 2 ದಿನಗಳ ಜಾಮೀನು

ಸುಳ್ಯ; ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಓರ್ವ ಆರೋಪಿಗೆ ಎರಡು ದಿನಗಳ ಪೆರೋಲ್ ದೊರಕಿದೆ.

ಸುಳ್ಯ ಮೂಲದ ಇಬ್ರಾಹಿಂ ಶಾ ನಾವೂರು ಎಂಬಾತನನ್ನು ಪ್ರವೀಣ್ ಹತ್ಯೆ ಪ್ರಕರಣದಲ್ಲಿ 15ನೇ ಆರೋಪಿಯಾಗಿ ಪೊಲೀಸರು ಬಂಧಿಸಿದ್ದರು.ಸುಳ್ಯದಲ್ಲಿ ಆತನ ತಂಗಿಯ ಮದುವೆ ಹಿನ್ನೆಲೆಯಲ್ಲಿ ಎರಡು ದಿನಗಳ ಜಾಮೀನು ದೊರೆತಿದೆ

ಮೈಸೂರು ಜೈಲಿನಲ್ಲಿದ್ದ ಈತನನ್ನು ಶನಿವಾರ ಬೆಳಗ್ಗೆ ಪೊಲೀಸ್ ಭದ್ರತೆಯಲ್ಲಿ ವಿವಾಹ ಸಮಾರಂಭದ ಸ್ಥಳಕ್ಕೆ ಕರೆ ತಂದಿದ್ದಾರೆ.

2022ರ ಜುಲೈ 26ರಂದು ಪ್ರವೀಣ್ ನೆಟ್ಟಾರ್ ಅವರನ್ನು ಬೆಳ್ಳಾರೆಯಲ್ಲಿದ್ದ ತನ್ನ ಚಿಕನ್ ಶಾಪ್ ಎದುರು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು.ಪ್ರಕರಣವನ್ನು ಎನ್ ಐಎ ತನಿಖೆಗೆ ಒಪ್ಪಿಸಲಾಗಿತ್ತು.ಎನ್ ಐಎ ಹಲವರನ್ನು ಬಂಧಿಸಿತ್ತು.

ಟಾಪ್ ನ್ಯೂಸ್