ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಅರೋಪಿಯನ್ನು ಎನ್ಐಎ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ.
ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಕೊಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 10 ಮಂದಿಯನ್ನು ಬಂಧಿಸಲಾಗಿದೆ.
ಈ ಮೊದಲು ತುಫೈಲ್ ಸುಳಿವು ನೀಡಿದವರಿಗೆ ಐದು ಲಕ್ಷ ರೂ ಬಹುಮಾನ ಕೂಡ ಘೋಷಿಸಲಾಗಿತ್ತು. ಇದೀಗ ಆತನಿಗರ ಬೆಂಗಳೂರಿನ ದಾಸರಹಳ್ಳಿಯಲ್ಲಿ ಬಂಧಿಸಿರುವ ಬಗ್ಗೆ ವರದಿಯಾಗಿದೆ.