ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಮಂಗಳೂರು:ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ 1500 ಪುಟಗಳ ಚಾರ್ಜ್‍ಶೀಟ್ ಅನ್ನು ಎನ್‍ಐಎ ವಿಶೇಷ ನ್ಯಾಯಲಯಕ್ಕೆ ಸಲ್ಲಿಕೆ ಮಾಡಿದೆ.

20ಕ್ಕೂ ಅಧಿಕ ಆರೋಪಿಗಳ ವಿರುದ್ಧ ಶುಕ್ರವಾರ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದು, ಇದರಲ್ಲಿ 240 ಸಾಕ್ಷಿಗಳ ಹೇಳಿಕೆ ದಾಖಲು ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ 14 ಆರೋಪಿಗಳ ಬಂಧಿಸಲಾಗಿದ್ದು, ಇನ್ನಿತರ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ಉಲ್ಲೇಖಿಸಿರುವ ಬಗ್ಗೆ ತಿಳಿದು ಬಂದಿದೆ.

ಈಗಾಗಲೇ ನೆಟ್ಟಾರು ಪ್ರವೀಣ್ ಕೊಲೆಗೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಆರೋಪಿಗಳ ಮಾಹಿತಿ ನೀಡಿದವರಿಗೆ ಎನ್ ಐಎ ನಗದು ಬಹುಮಾನ ಕೂಡ ಘೋಷಿಸಿದೆ.

ಟಾಪ್ ನ್ಯೂಸ್