ಹೊಸದಿಲ್ಲಿ:ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ ಸಿಬಿಐಯ ನೂತನ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.
ಪ್ರಧಾನಿ ನೇತೃತ್ವದಲ್ಲಿ ರಚನೆಗೊಂಡಿರುವ ವಿಶೇಷ ಸಮಿತಿ ಮೂವರು ಅರ್ಹ ಐಪಿಎಸ್ ಅಧಿಕಾರಿಗಳ ಪಟ್ಟಿಯನ್ನು ಸಚಿವ ಸಂಪುಟಕ್ಕೆ ಶಿಫಾರಸು ಮಾಡಿತ್ತು.
ಪ್ರವೀಣ್ ಸೂದ್ ಅವರು ಕರ್ನಾಟಕ ಕೇಡರ್‌ನ 1986-ಬ್ಯಾಚ್‌ನ IPS ಅಧಿಕಾರಿ. ಮೂರು ವರ್ಷಗಳ ಹಿಂದೆ ರಾಜ್ಯ ಡಿಜಿಪಿಯಾಗಿ ನೇಮಕಗೊಂಡಿದ್ದರು.
ಹಿಮಾಚಲ ಪ್ರದೇಶದ ಸೂದ್ ಅವರು IIT-ದಿಲ್ಲಿಯ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಅವರು ಮೇ 2024 ರಲ್ಲಿ ನಿವೃತ್ತರಾಗಬೇಕಿತ್ತು.
ಪ್ರಧಾನ ಮಂತ್ರಿ, ಸಿಜೆಐ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡುತ್ತದೆ.ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸುವ ಅವಕಾಶ ಇದೆ.