“ಪ್ರೈಮ್ ಮಿನಿಸ್ಟರ್ ಆಫ್ ಭಾರತ್”; ಮತ್ತೊಂದು ಪೋಸ್ಟ್ ವೈರಲ್..

ನವದೆಹಲಿ: ಜಿ20 ಸಭೆಗೆ ಆಗಮಿಸುವ ಅತಿಥಿಗಳಿಗೆ ರಾಷ್ಟ್ರಪತಿ ಭವನದಿಂದ ಆಯೋಜಿಸಿರುವ ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ಪ್ರೆಸಿಡೆಂಟ್ ಆಫ್ ಭಾರತ್ ಬಳಕೆ ಮಾಡಲಾಗಿತ್ತು.ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಇಂಡೋನೇಷ್ಯಾ ಭೇಟಿಯ ಮಾಹಿತಿ ಹಂಚಿಕೊಂಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ಎಕ್ಸ್ ನಲ್ಲಿ ಪ್ರೈಮ್ ಮಿನಿಸ್ಟರ್ ಆಫ್ ಭಾರತ್ ಎಂದು ಬರೆದಿರುವುದು ಕಂಡು ಬಂದಿದೆ.

ಸೆಪ್ಟೆಂಬರ್ 9ರಂದು ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯ ಔತಣಕೂಟದ ಲೆಟರ್ ಹೆಡ್‌ನಲ್ಲಿ ‘ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಾಗಿ ‘ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಮುದ್ರಿಸಿರುವುದು ಲೆಟರ್ ಹೆಡ್‌ ವ್ಯಾಪಕವಾಗಿ ವೈರಲ್ ಆಗಿತ್ತು.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್‌ ರಮೇಶ್ ಅವರು, ಜಿ20 ಶೃಂಗಸಭೆಯ ಔತಣಕೂಟಕ್ಕೆ ರಾಷ್ಟ್ರಪತಿ ಭವನಕ್ಕೆ ಆಮಂತ್ರಣ ಕಳುಹಿಸಲಾಗಿದೆ.ಅದರಲ್ಲಿ ಪ್ರೆಸಿಡೆಂಟ್ ಆಫ್ ಇಂಡಿಯಾ ಎಂದು ಬರೆಯುವ ಬದಲು ಪ್ರೆಸಿಡೆಂಟ್ ಆಫ್ ಭಾರತ್‌ ಎಂದು ಬರೆಯಲಾಗಿದೆ. ಸರಕಾರ ದೇಶದ ಹೆಸರನ್ನೇ ಬದಲಿಸಲು ಹೊರಟಿದೆ ಎಂದು ಹೇಳಿದ್ದಾರೆ. ಇದಲ್ಲದೆ ಭಾರತ ಎಂದರೆ ಅದು ಇಂಡಿಯಾ, ರಾಜ್ಯಗಳ ಒಕ್ಕೂಟ, ಆದರೆ ಈಗ ರಾಜ್ಯಗಳ ಒಕ್ಕೂಟದ ಮೇಲೆ ಆಕ್ರಮಣ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್