ಶಾಂತಿ ಕದಡಿದರೆ ಬಜರಂಗದಳ, ಆರೆಸ್ಸೆಸ್ ಎಂದು ನೋಡಲ್ಲ, ಮುಲಾಜಿಲ್ಲದೆ ನಿಷೇಧ ಮಾಡುತ್ತೇವೆ-ಖಡಕ್ ವರ್ನಿಂಗ್ ಕೊಟ್ಟು ಪ್ರಿಯಾಂಕ ಖರ್ಗೆ ಏನೆಲ್ಲಾ ಹೇಳಿದ್ರು?

ಬೆಂಗಳೂರು;ರಾಜ್ಯದಲ್ಲಿ ಯಾರಾದರೂ ಶಾಂತಿ ಕದಡಿದರೆ ಅದು ಬಜರಂಗದಳ ಅಥವಾ ಆರೆಸೆಸ್ಸ್ ಎಂಬುದನ್ನು ನಾವು ನೋಡಲ್ಲ, ಅಂತಹ ಸಂಘಟನೆಗಳನ್ನು ಸರಕಾರ ಮುಲಾಜಿಲ್ಲದೆ ನಿಷೇಧಿಸುತ್ತದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಖಡಕ್ ವಾರ್ನಿಂಗ್ ಕೊಟ್ಡಿದ್ದಾರೆ.

ಮೂರು ವರ್ಷಗಳಿಂದ ರಾಜ್ಯದಲ್ಲಿ ಕಾನೂನು ಮತ್ತು ಪೊಲೀಸರ ಭಯ ಇಲ್ಲದೆ ವರ್ತಿಸಲಾಗಿದೆ. ಇದಕ್ಕೆ ನಮ್ಮ ಸರಕಾರ ಕಡಿವಾಣ ಹಾಕಲಿದೆ ಎಂದು ಹೇಳಿದ ಪ್ರಿಯಾಂಕ ಖರ್ಗೆ, ಹಿಜಾಬ್ ನಿಷೇಧ ಮತ್ತು ಗೋಹತ್ಯೆ ನಿಷೇಧ ಸೇರಿದಂತೆ ರಾಜ್ಯದ ಪ್ರಗತಿಗೆ ಅಡ್ಡಿಯಾಗಿರುವ ಇತರೆ ಕಾನೂನುಗಳನ್ನು ಹಿಂಪಡೆಯಲಿದ್ದೇವೆ ಎಂದು ಹೇಳಿದ್ದಾರೆ‌.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನರು ಬಿಜೆಪಿಯನ್ನು ವಿಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು. ಕೇಸರಿಕರಣ ತಪ್ಪು ಎಂದು ಹೇಳಿದ್ದೇವೆ. ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ ಎಂದು ಅವರು ಹೇಳಿದ್ದಾರೆ.

ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕುವ ಕಾನೂನು ನಮಗೆ ಬೇಕಾಗಿದೆ. ಯಾರೋ ನಾಗಪುರದವರು ಆದೇಶಿಸುವ ಕಾನೂನು ನಮಗೆ ಬೇಕಾಗಿಲ್ಲ ಎಂದು ಶಾಂತಿ ಕದಡುವವರಿಗೆ ಪ್ರಿಯಾಂಕ ಖರ್ಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com