ಬೆಂಗಳೂರು;ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ಚಟುವಟಿಕೆ ಮುಂದುವರಿದಿದೆ.
ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿಕೆ ಶಿವಕುಮಾರ್, ಜೊತೆಗೆ 8 ಶಾಸಕರು ಸಚಿವರಾಗಿ ಪ್ರಮಾಣವಚನ ಹಾಗೂ ಓರ್ವರು ಸ್ಪೀಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ.ಇನ್ನುಳಿದ ಇಲಾಖೆಗೆ ಸಚಿವರ ನೇಮಕಕ್ಕೆ ಕಸರತ್ತು ನಡೆದಿದೆ.
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಸೇರಿದಂತೆ ಹೈಕಮಾಂಡ್ ಹಿರಿಯ ನಾಯಕರು ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿದ್ದಾರೆ.
ಈಗಾಗಲೇ ಸಿದ್ದರಾಮಯ್ಯ ಅವರ ಜೊತೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್,ಮಲ್ಲಿಕಾರ್ಜುನ್ ಖರ್ಗೆ ಜೊತೆಗೆ ಚರ್ಚೆ ನಡೆಸಿದ್ದು ಸಚಿವರ ಅಂತಿಮ ಪಟ್ಟಿ ಇಂದು ನಾಳೆಯೊಳಗೆ ಬಿಡುಗಡೆ ಸಾಧ್ಯತೆ ಇದೆ.
ಈಗಾಗಲೇ ಹಲವು ಸಚಿವರು ಹೈಕಮಾಂಡ್ ಮೂಲಕ ಸಚಿವ ಸ್ಥಾನಕ್ಕೆ ಲಾಬಿ ಮಾಡುತ್ತಿದ್ದಾರೆ.
ಇನ್ನು ಸಾಂಭವ್ಯ ಸಚಿವರ ಪಟ್ಟಿ ಇಲ್ಲಿದೆ..
ಈಶ್ವರ ಖಂಡ್ರೆ, ಲಕ್ಷ್ಮಿ ಹೆಬ್ಬಾಳಕರ್, ಶಿವಾನಂದ ಪಾಟೀಲ್,
ಶರಣಬಸಪ್ಪ ದರ್ಶನಾಪುರ, ರಾಯರೆಡ್ಡಿ, ಡಾ. ಮಹಾದೇವಪ್ಪ, ಪಿರಿಯಾಪಟ್ಟಣ ವೆಂಕಟೇಶ್, ಎಸ್.ಎಸ್. ಮಲ್ಲಿಕಾರ್ಜುನ, ಬೈರತಿ ಸುರೇಶ್, ಕೃಷ್ಣ ಬೈರೇಗೌಡ,ರಹೀಂ ಖಾನ್, ಅಜಯ್ ಸಿಂಗ್, ಪುಟ್ಟರಂಗ ಶೆಟ್ಟಿ, ನರೇಂದ್ರ ಸ್ವಾಮಿ, ಚಿಂತಾಮಣಿ ಸುಧಾಕರ್, ಹಿರಿಯೂರು ಸುಧಾಕರ್,
ಎಚ್.ಕೆ. ಪಾಟೀಲ್, ಚೆಲುವರಾಯಸ್ವಾಮಿ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎನ್ನಲಾಗಿದೆ.