ಪ್ರವಾದಿ ನಿಂದನೆಗೈದ ಬಿಜೆಪಿ ಶಾಸಕನ ಬಿಡುಗಡೆ ಬೆನ್ನಲ್ಲೇ ಭುಗಿಲೆದ್ದ ಪ್ರತಿಭಟನೆ,ಹಲವೆಡೆ ಲಾಠೀ ಚಾರ್ಜ್
ಹೈದರಾಬಾದ್;ಪ್ರವಾದಿ ನಿಂದನೆ ಬಳಿಕ ಬಂಧಿತನಾಗಿದ್ದ ಅಮಾನತುಗೊಂಡಿರುವ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ಅವರಿಗೆ ಜಾಮೀನು ಸಿಗುತ್ತಿದ್ದಂತೆ ಜನರ ಆಕ್ರೋಶ
ತೆಲಂಗಾಣದಲ್ಲಿ ಹೆಚ್ವಳವಾಗಿದೆ.
ಬಿಜೆಪಿ ಶಾಸಕ ರಾಜಾ ಸಿಂಗ್ಗೆ ಜಾಮೀನು ಸಿಕ್ಕಿರುವುದನ್ನು ವಿರೋಧಿಸಿ ಜನರು ಪ್ರತಿಭಟನೆ ನಡೆಸಿದ್ದಾರೆ.ಕೆಲವೆಡೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಅಂಬರ್ಪೇಟ್,ತಲಬಕಟ್ಟಾ,ಮೊಗಲ್ಪುರ,ಖಿಲ್ವತ್, ಬಹದ್ದೂರ್ಪುರ ಹಾಗೂ ಚಂಚಲಗುಡಾದಲ್ಲಿ ರಾಜಾಸಿಂಗ್ ವಿರುದ್ಧ ಪ್ರತಿಭಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಪ್ರತಿಭಟನಾಕಾರರು ಕೋರ್ಟ್ನ ಆದೇಶವನ್ನು ವಿರೋಧಿಸಿ ಬರ್ಕಾಸ್ನಿಂದ ಚಂದ್ರಾಯನಗುಟ್ಟದವರೆಗೆ ಮೆರವಣಿಗೆ ನಡೆಸಿದ್ದಾರೆ ಎನ್ನಲಾಗಿದೆ.
ಹೈದರಾಬಾದ್ನ ಶಾಲಿಬಂಡಾದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ ಏರ್ಪಟ್ಟಿದೆ. ಪ್ರತಿಭಟನಾಕಾರರು ಅಂಗಡಿಗಳನ್ನು ಮುಚ್ಚಿಸಿದ್ದು ಮಾತ್ರವಲ್ಲದೇ ರಾಜಾ ಸಿಂಗ್ ಪೋಸ್ಟರ್ಗೆ ಚಪ್ಪಲಿಯಿಂದ ಹೊಡೆದು ಅವರ ಪ್ರತಿಕೃತಿ ದಹಿಸಿದ್ದಾರೆ.
ನೂಪುರ್ ಶರ್ಮಾ ಬೆನ್ನಲ್ಲೇ ತೆಲಂಗಾಣದ ಅಮಾನತುಗೊಂಡಿರುವ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೆ ಈಡಾಗಿದ್ದಾರೆ.ಸಮುದಾಯದ ಭಾವನೆಗೆ ಧಕ್ಕೆಯುಂಟು ಮಾಡಿದ ಆರೋಪದ ಅಡಿಯಲ್ಲಿ ರಾಜಾ ಸಿಂಗ್ರನ್ನು ಬಂಧಿಸಲಾಗಿತ್ತು.ಬಳಿಕ ಕೆಲವೇ ಗಂಟೆಗಳಲ್ಲಿ ಬಿಡುಗಡೆ ಮಾಡಲಾಗಿತ್ತು.