SHOCKING ಹಾಸನದಲ್ಲಿ ಮಹಿಳಾ ಪಿಎಸ್ ಐಯ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಹಾಸನ:ಮಹಿಳಾ ಸಬ್‌ಇನ್ಸ್‌ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ.

ಕೊಣನೂರು ಪೊಲೀಸ್ ಠಾಣೆಯ ಪಿಎಸ್‌ಐ ಶೋಭಾ ಭರಮಕ್ಕನವರ್ ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ವೇಳೆ ಅವರ ಬಾಡಿಗೆ ಮನೆಯ ಕಿಟಕಿ ಒಡೆದು ಸೀಮೆಎಣ್ಣೆ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಬೆಂಕಿಯಿಂದ ಮನೆಯಲ್ಲಿದ್ದ ಲ್ಯಾಪ್‌ಟಾಪ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ, ಪೀಠೋಪಕಣಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಶೋಭಾ ರಜೆ ಮುಗಿಸಿ ಶುಕ್ರವಾರ ಮನೆಗೆ ವಾಪಸಾದಾಗ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು, ಡಿವೈಎಸ್‌ಪಿ ಮುರುಳೀಧರ್ ಹಾಗೂ ವೃತ್ತ ನಿರೀಕ್ಷಕ ರಘುಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಬಗ್ಗೆ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com