ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಂಗಳೂರು:ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಯಪ್ಪನಹಳ್ಳಿಯ ಕೃಷ್ಣಯ್ಯನಪಾಳ್ಯದಲ್ಲಿ ನಡೆದಿದೆ.
ಚಾರ್ಲ್ಸ್ (18) ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಚಾರ್ಲ್ಸ್ ಪ್ರಥಮ ಪಿಯುಸಿಯಲ್ಲಿ ಫೇಲಾಗಿದ್ದರಿಂದ ಮನನೊಂದಿದ್ದ.ಬಳಿಕ ಮರು ಪರೀಕ್ಷೆಯನ್ನು ಬರೆದಿದ್ದ. ಅದರಲ್ಲೂ ಫೇಲ್ ಆಗಿದ್ದ. ಈ ವೇಳೆ ಕಾಲೇಜಿನವರು ಬೇರೆ ಕಾಲೇಜಿಗೆ ಸೇರಿಸುವಂತೆ ಹೇಳಿದ್ದಾರೆ.
ಮೊದಲ ಬಾರಿ ಫೇಲಾಗಿದ್ದ ಚಾರ್ಲ್ಸ್, ಎರಡನೇ ಬಾರಿಯೂ ಫೇಲಾಗಿದ್ದಕ್ಕೆ ಖಿನ್ನತೆಗೆ ಒಳಗಾಗಿದ್ದ. ಬುಧವಾರ ರಾತ್ರಿ 9:30 ರ ಸುಮಾರಿಗೆ ಮನೆಯಲ್ಲಿ ಯಾರು ಇಲ್ಲದೆ ಇದ್ದಾಗ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.