ನದಿಯಲ್ಲಿ ಒಂದೇ ಕುಟುಂಬದ 7 ಮಂದಿಯ ಮೃತದೇಹ ಪತ್ತೆ ಕೇಸ್ ಗೆ ಟ್ವಿಸ್ಟ್; ಮಗನ ಸಾವಿಗೆ ಪ್ರತಿಕಾರವಾಗಿ 7 ಮಂದಿಯ ಕೊಲೆ!

ಪುಣೆ:ಇತ್ತೀಚೆಗೆ ಮಹಾರಾಷ್ಟ್ರದ ಪುಣೆಯ ಸಮೀಪದ ನದಿಯಿಂದ ಒಂದೇ ಕುಟುಂಬದ ಏಳು ಮಂದಿಯ ಮೃತದೇಹ ಹೊರ ತೆಗೆಯಲಾಗಿತ್ತು.ಇದೀಗ ಈ ಕುರಿತ ತನಿಖೆಯಲ್ಲಿ ಮಹತ್ವದ ಸುಳಿವು ಪೊಲೀಸರಿಗೆ ಲಭ್ಯವಾಗಿದೆ.

ಈ ಹಿಂದೆ ಆರೋಪಿಯೊಬ್ಬನ ಪುತ್ರನ ಸಾವಿನ ಪ್ರಕರಣಕ್ಕೆ ಪ್ರತಿಕಾರದ ಭಾಗವಾಗಿ ಒಂದೇ ಕುಟುಂಬದ 7 ಮಂದಿಯ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜನವರಿ 18 ರಿಂದ 24ರ ನಡುವೆ ಭೀಮಾ ನದಿ ದಂಡೆಯಲ್ಲಿ ಮೂರರಿಂದ ಏಳು ವರ್ಷದೊಳಗಿನ ಮೂವರು ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿಯ ಮೃತದೇಹ ಪತ್ತೆಯಾಗಿತ್ತು.

ಈ ಸಂಬಂಧ ಮೃತರ ಸಂಬಂಧಿಕರಾದ ಐವರನ್ನು ಬಂಧಿಸಲಾಗಿದೆ.

ಆರೋಪಿ ಪೈಕಿ ಒಬ್ಬನಾದ ಅಶೋಕ್ ಪವಾರ್ ಪುತ್ರ ಧನಂಜಯ್ ಪವಾರ್ ಅಪಘಾತದಲ್ಲಿ ಕೆಲವು ತಿಂಗಳ ಹಿಂದೆ ಸಾವನ್ನಪ್ಪಿದ್ದ.ಈ ಸಂಬಂಧ ಪುಣೆಯಲ್ಲಿ ಕೇಸ್ ದಾಖಲಾಗಿತ್ತು.ಇದರಿಂದ ಆಕ್ರೋಶಗೊಂಡಿದ್ದ ಅಶೋಕ್, ತನ್ನ ಮಗನ ಸಾವಿಗೆ ಹತ್ಯೆಯಾದ ಮೋಹನ್ ಪುತ್ರನೇ ಕಾರಣ ಎಂದು ಕೃತ್ಯ ನಡೆಸಿದ್ದಾನೆ ಎನ್ನಲಾಗಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com