BIG NEWS; ಪುನೀತ್ ಕೆರೆಹಳ್ಳಿ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧನ

ಬೆಂಗಳೂರು:ಇದ್ರೀಷ್ ಪಾಷಾ ಕೊಲೆ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಆತನಿಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಳೆದ ಹತ್ತು ವರ್ಷಗಳ ಸಮಾಜದಲ್ಲಿ ಸಾಮರಸ್ಯ ಕದಡುವ, ಸಮಾಜ ವಿರೋಧ ಕಾರ್ಯಗಳ, ಅಪರಾಧ ಪ್ರಕರಣಗಳನ್ನು ಆಧರಿಸಿ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಜೆಪಿ ನಗರ ನಿವಾಸಿಯಾಗಿರುವ ಈತ, ಮೂಲತಃ ಹಾಸನದವನು.ರಾಷ್ಟ್ರ ರಕ್ಷಣಾ ಪಡೆ ಎಂಬ ಸಂಘಟನೆಯನ್ನು ಕಟ್ಟಿಕೊಂಡು ಜನರನ್ನು ಬೆದರಿಸುವ, ಸಮಾಜದ ಶಾಂತಿ ಕದಡುವ,ಗೋ ರಕ್ಷಣೆ ಹೆಸರಿನಲ್ಲಿ ವ್ಯಾಪಾರಿಗಳನ್ನು ಬೆದರಿಸುವ ಕಾರ್ಯಗಳಲ್ಲಿ ತೊಡಗಿದ್ದ ಎಂದು ಮಾಹಿತಿ ನೀಡಲಾಗಿದೆ.

ಪುನೀತ್ ಕುಮಾರ್‌ ಅಲಿಯಾಸ್‌ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಪಟ್ಟಿ ತೆರೆಯಲು ಪೊಲೀಸರು ಒಂದು ತಿಂಗಳು ಸಿದ್ಧತೆ ನಡೆಸಿದ್ದಾರೆ.ಈ ಬಗ್ಗೆ ಕಳೆದ ತಿಂಗಳು ಚಾಮರಾಜಪೇಟೆ ಉಪ ವಿಭಾಗದ ಪೊಲೀಸರು ಪುನೀತ್‌ಗೆ ತಿಳಿವಳಿಕೆ ನೋಟಿಸ್‌ ಜಾರಿ ಮಾಡಿದ್ದರು.

ಪುನೀತ್ ಕೆರೆಹಳ್ಳಿ ವಿರುದ್ಧ ಬೇಗೂರು ಪೊಲೀಸ್‌ ಠಾಣೆಯಲ್ಲಿ ಎರಡು, ಡಿಜೆ ಹಳ್ಳಿ, ಕಗ್ಗಲೀಪುರ, ಹಂಪಿ, ಮಳವಳ್ಳಿ, ಹಲಸೂರು, ಚಾಮರಾಜಪೇಟೆ, ಎಲೆಕ್ಟ್ರಾನ್‌ ಸಿಟಿ, ಸಾತನೂರು ಪೊಲೀಸ್‌ ಠಾಣೆಗಳಲ್ಲಿ ಒಂದೊಂದು ಪ್ರಕರಣ ದಾಖಲಾಗಿವೆ.

ಸಿಸಿಬಿ ಪೊಲೀಸರು ಪುನೀತ್‌ ಕೆರೆಹಳ್ಳಿಯನ್ನು ಆಗಸ್ಟ್ 11ರ ತಡರಾತ್ರಿಯೇ ಬಂಧಿಸಿದ್ದಾರೆ. ಗೂಂಡಾ ಕಾಯ್ದೆಯಡಿ ಬಂಧನವಾದರೆ ಒಂದು ವರ್ಷ ಜಾಮೀನು ಸಿಗುವುದಿಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ