ಪುನೀತ್ ಕೆರಹಳ್ಳಿ ಬಂಧನ ಪ್ರಕರಣ; ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೊಟೀಸ್

ಬೆಂಗಳೂರು;ಪುನೀತ್ ಕೆರೆಹಳ್ಳಿಯನ್ನು ಗೂಂಡಾ ಕಾಯಿದೆಯಡಿ ಬಂಧಿಸಿರುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಪುನೀತ್ ಕೆರೆಹಳ್ಳಿ ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠವು ವಿಚಾರಣೆ ನಡೆಸಿದೆ‌.

ಬೆಂಗಳೂರು ಪೊಲೀಸ್ ಆಯುಕ್ತರು
ತನ್ನನ್ನು ವಶಕ್ಕೆ ಪಡೆಯಲು ಮಾಡಿರುವ ಆದೇಶವನ್ನು ವಜಾ ಮಾಡುವಂತೆ ಪುನೀತ್ ಕೆರಹಳ್ಳಿ ಕೋರ್ಟ್ ಮೊರೆ ಹೋಗಿದ್ದಾನೆ.

ಇದರಿಂದಾಗಿ ನ್ಯಾಯಾಲಯವು ರಾಜ್ಯ ಸರಕಾರ, ನಗರ ಪೆÇಲೀಸ್ ಆಯುಕ್ತರು ಒಳಗೊಂಡು ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯಿದೆಯಡಿ ಪ್ರಕರಣ ದಾಖಲಿಸಿ ಸಿಸಿಬಿ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು.

ಟಾಪ್ ನ್ಯೂಸ್