ಬೆಂಗಳೂರು:ಗೋಸಾಗಣೆ ವೇಳೆ ಇದ್ರೀಶ್ ಪಾಷಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಪುನೀತ್ ಕೆರೆಹಳ್ಳಿ ಹಾಗೂ ಇತರೆ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವ ಬಗ್ಗೆ ವರದಿಯಾಗಿದೆ.
ಆರೋಪಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ ಏಕಸದಸ್ಯ ಪೀಠ ಜಾಮೀನು ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ.
ಆರೋಪಿಗಳಾದ ಪುನೀತ್ ಕೆರೆಹಳ್ಳಿ, ಗೋಪಿ, ಸುರೇಶ್, ಪವನ್ ಕುಮಾರ್ ಎ.ಎನ್.ಪಿ ಲಿಂಗಪ್ಪ ಎಂಬುವವರಿಗೆ ಜಾಮೀನು ಮಂಜೂರು ಮಾಡಿದೆ ಎನ್ನಲಾಗಿದೆ.ಆದರೆ ಈ ಬಗ್ಗೆ ಅದೀಕೃತ ಪ್ರತಿ ಲಭ್ಯವಾಗಿಲ್ಲ ಎಂದು etv bharat ವರದಿ ಮಾಡಿದೆ.
ಮಾರ್ಚ್ 31ರಂದು ಮಂಡ್ಯದಿಂದ ಬೆಂಗಳೂರಿನತ್ತ ಆಗಮಿಸುತ್ತಿದ್ದ ಜಾನುವಾರು ಸಾಗಣೆ ವಾಹನವೊಂದನ್ನು ಸಾತನೂರು ಪೊಲೀಸ್ ಠಾಣೆ ಸಮೀಪ ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರು ಅಡ್ಡಗಟ್ಟಿದ್ದರು. ಬಳಿಕ ವಾಹನದಲ್ಲಿ ಇದ್ದವರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.
ಏಪ್ರಿಲ್ 1ರಂದು ಬೆಳಗ್ಗೆ ಘಟನಾ ಸ್ಥಳದಿಂದ ಅಂದರೆ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿ ಇದ್ರೀಶ್ ಪಾಷಾ ಅವರ ಶವ ಪತ್ತೆಯಾಗಿತ್ತು.ಇದು ಪುನೀತ್ ಕೆರೆಹಳ್ಳಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವುದು ಎಂದು ಆರೋಪಿಸಲಾಗಿತ್ತು.
ಪ್ರಕರಣ ರಾಜ್ಯದಾದ್ಯಂತ ಭಾರೀ ಸದ್ದು ಮಾಡಿತ್ತು.
ಪುನೀತ್ ಮತ್ತು ಸಹಚರರಿಂದ ಹಲ್ಲೆ ನಡೆದಿದೆ ಎಂದು ಪಾಷಾ ಅವರ ಸಹೋದರ ಯೂನುಸ್ ಪಾಷಾ ದೂರು ನೀಡಿದ್ದರು.ಬಳಿಕ ರಾಜಸ್ಥಾನದಲ್ಲಿ ತಲೆಮರೆಸಿಕೊಂಡಿದ್ದ ಪುನೀತ್ ಹಾಗೂ ತಂಡಕ್ಕೆ ಪೊಲೀಸರು ಬಂಧಿಸಿದ್ದರು.