ಪುತ್ತೂರು;ಬುಧವಾರ ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲಿ ಫಲಿತಾಂಶ ಪ್ರಕಟಗೊಂಡ ನಂತರ ನಗರದ ಮುಖ್ಯರಸ್ತೆಯಲ್ಲಿ ಅನುಮತಿಯಿಲ್ಲದೆ ವಿಜಯೋತ್ಸವ ನಡೆಸಿದ ಪುತ್ತಿಲ ಪರಿವಾರದ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಸಾರ್ವಜನಿಕ ಶಾಂತಿಭಂಗ ಪ್ರಕರಣ ದಾಖಲಾಗಿದೆ.
ಆರ್ಯಾಪು ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರದಿಂದ ಸ್ಪರ್ಧಿಸಿದ್ದ ಸುಬ್ರಹ್ಮಣ್ಯ ಬಲ್ಯಾಯ ಗೆಲುವು ಸಾಧಿಸಿದ್ದರು.
ಫಲಿತಾಂಶ ಪ್ರಕಟಗೊಂಡ ಬಳಿಕ ತಾಲೂಕು ಆಡಳಿತ ಸೌಧದ ಬಳಿಯಿಂದ ಪುತ್ತಿಲ ಪರಿವಾರದ ಕಚೇರಿ ತನಕ ನಗರದ ಮುಖ್ಯರಸ್ತೆಯಲ್ಲಿ ಡಿಜೆ ಅಳವಡಿಸಿ ಮೆರವಣಿಗೆ ನಡೆಸಲಾಗಿತ್ತು.ಆದರೆ ಮೆರವಣಿಗೆ ನಡೆಸಲು ಪೊಲೀಸರಿಂದ ಅನುಮತಿ ಪಡೆದಿರಲಿಲ್ಲ.ಈ ಹಿನ್ನೆಲೆಯಲ್ಲಿ ಅನಧಿಕೃತ ಮೆರವಣಿಗೆ ನಡೆಸಿದ ಸಂಘಟಕರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕ ಶಾಂತಿಭಂಗ ಪ್ರಕರಣ ದಾಖಲಿಸಲಾಗಿದೆ.