ಪುತ್ತೂರು;ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಆಳವಡಿಕೆಗೆ ಸಂಬಂಧಿಸಿ ಇಬ್ಬರು ಆರೋಪಿಗಳ ಬಂಧನವಾಗಿರುವ ಬಗ್ಗೆ ವರದಿಯಾಗಿದೆ.
ನರಿಮೊಗರು ಸಮೀಪದ ವಿಶ್ವನಾಥ್ ಮತ್ತು ಮಾಧವ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.
ಬಿಜೆಪಿ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರ ಬ್ಯಾನರ್ ನಲ್ಲಿ ಇತ್ತು.
ಬ್ಯಾನರ್ ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ. ನೊಂದ ಹಿಂದೂ ಕಾರ್ಯಕರ್ತರು’ ಎಂದು ಬರೆಯಲಾಗಿದೆ.ಅಷ್ಟೇ ಅಲ್ಲದೇ ಈ ಬ್ಯಾನರ್ ಗೆ ಚಪ್ಪಲಿ ಹಾರವನ್ನು ಹಾಕಲಾಗಿತ್ತು.
ಈ ಬ್ಯಾನರ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.ವೈರಲ್ ಬೆನ್ನಲ್ಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.