ಪುತ್ತೂರು; ಹೆರಿಗೆ ವೇಳೆ ತೀವ್ರ ರಕ್ತಸ್ರಾವವಾಗಿ ಮಹಿಳೆ ಮೃತ್ಯು

ಪುತ್ತೂರು; ಹೆರಿಗೆ ವೇಳೆ ತೀವ್ರ ರಕ್ತ ಸ್ರಾವವಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ‌ ನಡೆದಿದೆ.

ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ನಿವಾಸಿ ಬಾಲಕೃಷ್ಣ ಗೌಡ ಎಂಬವರ ಪತ್ನಿ ಭವ್ಯ (28)ಮೃತರು.ಇವರು ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದರು.

ಹೆರಿಗೆ ವೇಳೆ ಭವ್ಯ ಮೃತಪಟ್ಟಿದ್ದು ಗಂಡು ಮಗು ಆರೋಗ್ಯವಾಗಿದೆ. ಭವ್ಯ ಅವರಿಗೆ 3ನೇ ಹೆರಿಗೆಯಾಗಿದ್ದು, ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ನಿನ್ನೆ ರಾತ್ರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು.

ಹೆರಿಗೆ ವೇಳೆ ತೀವ್ರ ರೀತಿಯಲ್ಲಿ ರಕ್ತಸ್ರಾವ ಉಂಟಾಗಿದ್ದು, ಅವರನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ