ಪುತ್ತೂರು; ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ.

ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16) ಮೃತ ಯುವತಿ.ದೀಕ್ಷಾ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದರು ಎನ್ನಲಾಗಿದೆ.

ದೀಕ್ಷಾ ಮನೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು,ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ಈಶ್ವರಮಂಗಲ ಹೊರಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್