ಪುತ್ತೂರು:ಪುತ್ತೂರಿನಿಂದ ಕಾಣಿಯೂರು ಕಡೆಗೆ ತೆರಳುವ ಬಸ್ಸಿನಲ್ಲಿ ಯುವಕನೋರ್ವ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಮಹಿಳೆಯೋರ್ವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗೆ ಟ್ವೀಟ್ ಮೂಲಕ ದೂರು ನೀಡಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಮಹಿಳೆ ಪುತ್ತೂರಿನಿಂದ ನಿಂತಿಕಲ್ಲಿಗೆ ಬಸ್ಸಲ್ಲಿ ಸಂಜೆ ಬರುತ್ತಿರುವಾಗ ಯುವಕನೋರ್ವ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದು ಈ ಬಗ್ಗೆ ಟ್ವೀಟ್ ಮೂಲಕ ದೂರು ನೀಡಿದ್ದರು. ಬಳಿಕ ಫೋನ್ ನಂಬರನ್ನು ಮಹಿಳೆಗೆ ನೀಡಿದ್ದು ಬಳಿಕ ಸವಣೂರಲ್ಲಿ ಬಸ್ಸಿನಿಂದ ಇಳಿದು ಹೋಗಿದ್ದರು.
ಈ ಬಗ್ಗೆ ಮಹಿಳೆಯ ದೂರಿನ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ.
ಇದೀಗ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಟ್ವಿಟರ್ ಖಾತೆಯಲ್ಲಿ ಹೇಳಲಾಗಿದೆ.