ಪುತ್ತೂರು; ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಮೃತ್ಯು

ಪುತ್ತೂರು: ವೀಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಕಟ್ಟತ್ತಾರು ನಿವಾಸಿ ಯುವಕ ಇಂದು ಮೃತಪಟ್ಟಿದ್ದಾರೆ.

ಅಬ್ದುಲ್ ನಾಸಿರ್ ಮೃತ ಯುವಕ.

ಅಬ್ದುಲ್ ನಾಸಿರ್ ಆತ್ಮಹತ್ಯೆ ಯತ್ನಕ್ಕೂ ಮುನ್ನ ವೀಡಿಯೋ ಮಾಡಿ ನಾನು ಬೆಳ್ಳಾರೆ ಸಮೀಪದ ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದು ಅದ್ರಾಮ ಮತ್ತು ಕುಟುಂಬದವರು ಸೇರಿ ನನ್ನನ್ನು ಮನೆಗೆ ಕರೆದುಕೊಂಡು ಹೋಗಿ ನನಗೆ ಹೊಡೆದಿದ್ದಾರೆ ಎಂದು ಆರೋಪಿಸಿದ್ದರು. ಇದರಿಂದ ಮನನೊಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದರು.

ಬಳಿಕ ನಾಸಿರ್ ಅವರು ಪುತ್ತೂರು ರೈಲ್ವೇ ಸ್ಟೇಷನ್ ಬಳಿ ವಿಷ ಸೇವಿಸಿದ್ದಾರೆ ಎನ್ನಲಾಗಿದ್ದು ಆ ಬಳಿಕ ಅವರನ್ನು ಯಾರೋ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು