ಪುತ್ತೂರು; ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಪುತ್ತೂರು:ಕೀಟನಾಶಕ ಸೇವಿಸಿ ಪಿಯುಸಿ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡರ ಪುತ್ರಿ ನಿಶಾ (17) ಮೃತ ಯುವತಿ.

ನಿಶಾ ಬಿ ಎಮ್ ರವರು ಪುತ್ತೂರು ನಗರದ ಖಾಸಗಿ ಕಾಲೇಜಿನ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಹದಿನೈದು ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಷ್ಟ್ರ ಮಟ್ಟದ ಓಟ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಅಲ್ಲಿ ಯಾವುದೇ ಬಹುಮಾನ ದೊರೆಯದ ಹಿನ್ನೆಲೆ ಮನೆಗೆ ಬೇಸರದಿಂದ ಬಂದಿದ್ದರು.

ನ.14ರಂದು ವಿಪರೀತವಾಗಿ ವಾಂತಿ ಮಾಡುತ್ತಿದ್ದ ಅವರನ್ನು ವಿಚಾರಿಸಿದಾಗ ಕೀಟನಾಶಕ ಸೇವಿಸಿರುವುದು ಬಯಲಾಗಿದೆ.

ಬಳಿಕ ನಿಶಾ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನ.25ರಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೆ ನಿಶಾ ಮೃತಪಟ್ಟಿದ್ದಾರೆ.

ಈ ಬಗ್ಗೆ ನಿಶಾ ಅವರ ಸಹೋದರ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್