ಪುತ್ತೂರು; ಸಹಪಾಠಿ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದನ್ನು ನೆಪವಾಗಿಸಿ ವಿದ್ಯಾರ್ಥಿ ಮೇಲೆ ಮಾರಣಾಂತಿಕವಾಗಿ ಹಲ್ಲೆ, ಘಟನೆಯ ಬಗ್ಗೆ ಸಂತ್ರಸ್ತ ಹೇಳಿದ್ದೇನು?

-ಮಹಮ್ಮದ್ ಫಾರಿಸ್ ಹಲ್ಲೆಗೊಳಗಾದವರು.

ಪುತ್ತೂರು:ಪುತ್ತೂರಿನಲ್ಲಿ ಅನೈತಿಕ ಪೊಲೀಸ್ ಗಿರಿ ನಡೆದಿದ್ದು, ಅಮಾಯಕ ಕಾಲೇಜು ವಿದ್ಯಾರ್ಥಿ ಮೇಲೆ ಸಹಪಾಠಿ ಜೊತೆ ಮಾತನಾಡಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ.

ಹಲ್ಲೆಯಿಂದ ಪರ್ಲಡ್ಕ ಗೋಲಿಕಟ್ಟೆ ನಿವಾಸಿ ಮಹಮ್ಮದ್ ಫಾರಿಸ್ (20) ಗಂಭೀರ ಗಾಯಗೊಂಡಿದ್ದು, ಯುವಕನಿಗೆ ಒಂದು ಕಿವಿ ಕೇಳಿಸದಂತಾಗಿದೆ ಎಂದು ತಿಳಿದು ಬಂದಿದೆ.

ಸಹಪಾಠಿ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ರೂಂ ಒಂದರಲ್ಲಿ ಕೂಡಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಂತ್ರಸ್ತ ಫಾರಿಸ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಕುರಿತು ಪಾರಿಶ್‌ ಹೇಳಿದ್ದೇನು?

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೊಹಮ್ಮದ್‌ ಪಾರಿಶ್‌, ಬಜರಂಗದಳದ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ನನ್ನ ಕ್ಲಾಸ್‌ಮೇಟ್‌ ಮತ್ತು ನಾನು ಇಬ್ಬರೂ ಅಂಗಡಿಯಲ್ಲಿ ಜ್ಯೂಸ್‌ ಕುಡಿಯುತ್ತಿದ್ದೆವು. ಇದಾದ ಬಳಿಕ 15 ಜನ ನನ್ನನ್ನು ಕರೆದರು. ನಾನು ಹೆಸರು ಹೇಳಿದ ಬಳಿಕ ನಿನ್ನಲ್ಲಿ ಮಾತನಾಡಲಿದೆ ಎಂದು ನನ್ನನ್ನು ರೂಂ ಒಂದಕ್ಕೆ ಕರೆದೊಯ್ದರು. ಅಲ್ಲಿ ಸುಮಾರು 50 ಮಂದಿ ಸೇರಿಕೊಂಡು ನನ್ನ ಮೇಲೆ ವೈರ್ ಮತ್ತು ಲಾಠಿಯಿಂದ ಹೊಡೆದರು. ಕಬ್ಬಿಣ ಬಿಸಿ ಮಾಡಿ ಮೈಮೇಲಿಟ್ಟು ಹಲ್ಲೆ ನಡೆಸಿದರು, ಬಳಿಕ ನೀನು ಪೊಲೀಸರಿಗೆ ದೂರು ನೀಡಿದರೆ ನಿನ್ನನ್ನು ಕೊಲೆ ಮಾಡುತ್ತೇವೆ. ನಿನ್ನ ಮೇಲೆ ಪೋಕ್ಸೋ ಕಾಯ್ದೆ ದಾಖಲಾಗುವಂತೆ ಮಾಡುತ್ತೇವೆ ಎಂದು ಹೆದರಿಸಿದರು ಎಂದು ಗಾಯಾಳು ಫಾರಿಸ್ ತಿಳಿಸಿದ್ದಾರೆ.

ಈ ಕುರಿತು ಪುತ್ತೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಮುಸ್ಲಿಂ ಮುಖಂಡರು ಆಗ್ರಹಿಸಿದ್ದಾರೆ.ಇಲ್ಲದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com