ಪುತ್ತೂರು: ಯುವತಿಗೆ ಚೂರಿ ಇರಿತ, ಸ್ಥಿತಿ ಗಂಭೀರ

ಪುತ್ತೂರು:ಯುವತಿಗೆ ಮೇಲೆ ಚಾಕು ಇರಿದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ನಡೆದಿದೆ.

ವಿಟ್ಲ ಸಮೀಪದ ಅಳಿಕೆಯ ಗೌರಿ (25) ಮೇಲೆ ಯುವಕನೋರ್ವ ಚೂರಿಯಿಂದ ಇರಿದು ಪರಾರಿಯಾಗಿದ್ದ.ಆರೋಪಿಗೆ ಪದ್ಮರಾಜ್ ಎಂದು ಗುರುತಿಸಲಾಗಿದೆ.ಆತನಿಗೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಗಂಭೀರ ಗಾಯಗೊಂಡ ಯುವತಿಯನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಸರ್ಕಾರಿ ಬಸ್ ನಿಲ್ದಾಣದ ಬಳಿಯ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವತಿಗೆ ಸರಪಾಡಿ ಮೂಲದ ಯುವಕ ಚಾಕು ಇರಿದಿದ್ದಾನೆ.

ಬೈಕ್ ನಲ್ಲಿ ಬಂದಿದ್ದ ಯುವಕ, ಯುವತಿಯನ್ನು ತಡೆದು ಚೂರಿಯಲ್ಲಿ ಇರಿದಿದ್ದಾನೆ.

ಸ್ಥಳದಲ್ಲಿರುವ ಸಿಸಿಟಿವಿ ಆಧರಿಸಿ ಪುತ್ತೂರು ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ