ಪುತ್ತೂರು; ಬ್ಯಾನರ್ ಹಾಕಿದ ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯ ಆರೋಪ, ಪಿಎಸ್ ಐ, ಪೇದೆ ಅಮಾನತು

ಪುತ್ತೂರು;ನಳಿನ್ ಕುಮಾರ್ ಕಟೀಲ್ ಮತ್ತು ಡಿ.ವಿ.ಸದಾನಂದ ಗೌಡ ಅವರಿಗೆ ಶ್ರದ್ದಾಂಜಲಿ ಕೋರಿ ಬ್ಯಾನರ್ ಅಳವಡಿಸಿದ ಪ್ರಕರಣದಲ್ಲಿ ಬಂಧಿತ ಆರೋಪಿಗಳಿಗೆ
ಪೊಲೀಸರು ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದ ಹಿನ್ನೆಲೆ ಪುತ್ತೂರು ಗ್ರಾಮಾಂತರ ಪಿಎಸ್ ಐ ಹಾಗೂ ಓರ್ವ ಪೇದೆಯನ್ನು ಅಮಾನತು ಮಾಡಲಾಗಿದೆ.

ಗಾಯಾಳು ಅವಿನಾಶ್ ಎಂಬವರು ತಂದೆ ವೇಣುನಾಥ್ ಅವರು ಪುತ್ತೂರು ಡಿವೈಸ್ಪಿ, ಪುತ್ತೂರು ಗ್ರಾಮಾಂತರ ಎಸ್ಸೈ ಶ್ರೀನಾಥ್ ರೆಡ್ಡಿ, ಪಿಸಿ ಹರ್ಷಿತ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.

ಇದೀಗ ಪ್ರಕರಣಕ್ಕೆ ಸಂಬಂಧಿಸಿ ಇಲಾಖೆಯ ಆಂತರಿಕ ತನಿಖೆ ನಡೆಯುತ್ತಿದೆ.ಈ ಮಧ್ಯೆ ಗ್ರಾಮಾಂತರ ಎಸ್ಸೈ ಶ್ರೀನಾಥ್ ರೆಡ್ಡಿ, ಪಿಸಿ ಹರ್ಷಿತ್ ಅವರನ್ನು ಅಮಾನತು ಮಾಡಿರುವ ಬಗ್ಗೆ ವರದಿಯಾಗಿದೆ.ಹಾಗೂ ಡಿವೈಎಸ್ಪಿ ವಿರುದ್ಧ ಇಲಾಖಾ ಕ್ರಮಕ್ಕೆ ಸೂಚಿಸಲಾಗಿದೆ ಎಂದು ವರದಿ ತಿಳಿಸಿದೆ.

ಇದೀಗ ಪ್ರಕರಣದ ತನಿಖೆಗೆ ಬಂಟ್ವಾಳ ಡಿವೈಎಸ್ಪಿಗೆ ವರ್ಗಾಯಿಸಲಾಗಿದೆ ಎಂದು ವರದಿಯಾಗಿದೆ.

ದೌರ್ಜನ್ಯಕ್ಕೆ ಸಂಬಂಧಿಸಿದ ಪೋಟೋಗಳು ಹಾಗೂ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪ್ರಭಾವಿಗಳ ಒತ್ತಡಕ್ಕೆ ಒಳಗಾಗಿ ಪೊಲೀಸರು ಆರೋಪಿಗಳಿಗೆ ಚಿತ್ರ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಬಂಧಿತ ಆರೋಪಿಗಳನ್ನು ಪಕ್ಷೇತರ ಅಭ್ಯರ್ಥಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಜಾಮೀನು ಮೂಲಕ ಠಾಣೆಯಿಂದ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಇನ್ನೊಂದು ವಿಡಿಯೋದಲ್ಲಿ ಯುವಕರು ನಡೆದಾಡಲು ಕಷ್ಟ ಪಡುವ ರೀತಿಯಲ್ಲಿ ಹೆಜ್ಜೆ ಹಾಕುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು.

ಟಾಪ್ ನ್ಯೂಸ್