ಪುತ್ತೂರು; ಬಸ್ ನಲ್ಲಿ ಯುವತಿಗೆ ಕಿರುಕುಳ, ಆರೋಪಿಯ ಬಂಧನ

-ಶಹನಾಝ್ ಈ ಕುರಿತು ಪ್ರಕರಣ ದಾಖಲಿಸಿದ್ದಾರೆ.

ಪುತ್ತೂರು;ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ಪ್ರಯಾಣಿಕನೊಬ್ಬ ಅಶ್ಲೀಲವಾಗಿ ವರ್ತಿಸಿ ಕಿರುಕುಳ ನೀಡಿದ ಘಟನೆ ನೀಡಿರುವ ಘಟನೆ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಮಹಿಳಾ ಠಾಣೆಗೆ ಸಂತ್ರಸ್ಥ ಮಹಿಳೆ ದೂರು ನೀಡಿದ್ದಾರೆ,

ಉಪ್ಪಳದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕನ್ಯಾನ ಗ್ರಾಮದ ಯುವತಿ ಶಹನಾಝ್ ಎಂಬವರುವ ತಾಯಿ ಜೊತೆ ಹತ್ತಿದ್ದರು.

ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮುರ ಎಂಬಲ್ಲಿ, ಬಸ್‌ನ ಸೀಟಿನ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಅಶ್ಲೀಲವಾಗಿ ವರ್ತಿಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ವ್ಯಕ್ತಿಯನ್ನು ಪ್ರಶ್ನಿಸುತ್ತಿದ್ದಂತೆ ಆತ ಬೊಳುವಾರಿನಲ್ಲಿ ಬಸ್‌ನಿಂದ ಇಳಿದು ಹೋಗಿದ್ದಾನೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸುಬ್ರಹ್ಮಣ್ಯ ಭಟ್ ಎಂಬಾತನಿಗೆ ಬಂಧಿಸಿದ್ದಾರೆ.ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಟಾಪ್ ನ್ಯೂಸ್