ನವದೆಹಲಿ: ಇಸ್ರೇಲ್ ಪರ ಗೂಡಚರ್ಯೆ ಹಿನ್ನೆಲೆ ಎಂಟು ಮಂದಿ ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗಳಿಗೆ ಕತಾರ್ ನ ನ್ಯಾಯಾಲಯವು ಮರಣದಂಡನೆ ವಿಧಿಸಿದೆ.
ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬಿರೇಂದ್ರ ಕುಮಾರ್ ವರ್ಮ, ಕ್ಯಾಪ್ಟನ್ ಸೌರಭ್ ವಸಿಷ್ಠ್, ಕಮಾಂಡರ್ ಅಮಿತ್ ನಾಗ್ಪಾಲ್, ಕಮಾಂಡರ್ ಪೂರ್ಣೇಂದು,ಕಮಾಂಡರ್ ಸುಗುಣಕರ್ ಪಕಲ, ಕಮಾಂಡರ್ ಸಂಜೀವ್ ಗುಪ್ತಾ ಮತ್ತು ಸೈಲರ್ ರಾಗೇಶ್ ಗೆ ಶಿಕ್ಷೆ ವಿಧಿಸಲಾಗಿದೆ.
ಮರಣದಂಡನೆಗೆ ಒಳಗಾಗಿರುವ ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗಳು ಕಳೆದ ವರ್ಷ ಆಗಸ್ಟ್‌ನಿಂದ ಜೈಲಿನಲ್ಲಿದ್ದಾರೆ. ಅವರ ಬಿಡುಗಡೆಗಾಗಿ ಭಾರತ ಸರ್ಕಾರ ಶ್ರಮಿಸುತ್ತಿತ್ತು. ಈ ಮಾರ್ಚ್ ತಿಂಗಳಲ್ಲಿ ಅವರ ವಿಚಾರಣೆ ನಡೆದಿತ್ತು. ಅವರ ಜಾಮೀನು ಅರ್ಜಿಗಳು ಹಲವು ಬಾರಿ ತಿರಸ್ಕೃತಗೊಂಡಿದ್ದವು.
ಈ ಕುರಿತು ಮಾಹಿತಿ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಅಲ್ ದಹ್ರಾ ಕಂಪನಿಯ ಎಂಟು ಭಾರತೀಯ ಉದ್ಯೋಗಿಗಳನ್ನು ಒಳಗೊಂಡಿರುವ ಪ್ರಕರಣದಲ್ಲಿ ಕತಾರ್‌ನ ಪ್ರಥಮ ನಿದರ್ಶನದ ನ್ಯಾಯಾಲಯವು ಇಂದು ತೀರ್ಪು ನೀಡಿದೆ.ತೀರ್ಪು ಪ್ರಶ್ನಿಸಿ ಭಾರತ ಮೇಲ್ಮನವಿ ಸಲ್ಲಿಸಲಿದೆ.