ದ್ವೇಷ ಭಾಷಣ ಪ್ರಕರಣ;ಬಜರಂಗದಳದ ರಘು ಸಹಚರರ ಬಂಧನ

ಸಕಲೇಶಪುರ;ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂದಿಸಿದಂತೆ ತಲೆಮರೆಸಿಕೊಂಡಿರುವ ಬಜರಂಗದಳದ ರಘುವಿನ ಐವರು ಸಹಚರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಬಗ್ಗೆ ವರದಿಯಾಗಿದೆ.

ಬಜರಂಗದಳ ಸಕ್ರಿಯ ಕಾರ್ಯಕರ್ತ ಶ್ರೀಕಾಂತ್, ಶ್ರೀಜೀತ್, ಪ್ರತಾಪ್, ಹಾಗೂ ಇತರೆ ಇಬ್ಬರನ್ನೂ ಬಂದಿಸಲಾಗಿದೆ ಎಂದು ತಿಳಿದು ಬಂದಿದೆ.

ಸಕಲೇಶಪುರ ತಾಲೂಕಿನ ವಿವಿಧ ಪ್ರದೇಶದಿಂದ ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. ರಘು ಬಂಧನಕ್ಕೆ ಶೋಧ ಕಾರ್ಯ ಮುಂದುವರಿದಿದೆ.‌

ಗೋ ಹತ್ಯೆ ತಡೆಯುವಲ್ಲಿ ಪೋಲಿಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಸಕಲೇಶಪುರ ಪಟ್ಟಣದಲ್ಲಿ ಶುಕ್ರವಾರ ನಡೆದ ಬಜರಂಗದಳದ ಪ್ರತಿಭಟನೆಯಲ್ಲಿ ರಘು, ತರಕಾರಿ, ಮೀನು ಮಾರಾಟ ಮಾಡಲು ಹಿಂದೂಗಳ ಮನೆಯ ಬಳಿ ಬರುವಂತ ವ್ಯಾಪಾರಿಗಳು ಎಚ್ಚರಿಕೆಯಿಂದಿರಿ, ಇಲ್ಲಾಂದ್ರೆ ನಮ್ಮಲ್ಲಿರುವ ಕೋವಿಯೊಳಗಿನ ಗುಂಡು ಹೊರಗಡೆ ಬರುತ್ತೆ, ನಾವು ಕೂಡ ಗುಂಡು ಹಾರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದ.ಈ ಕುರಿತ ವಿಡಿಯೋ ಕೂಡ ವೈರಲ್ ಆಗಿತ್ತು.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ