ಭುವನೇಶ್ವರ;ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತಕ್ಕೆ ಸಂಬಂಧಪಟ್ಟಂತೆ 7 ಮಂದಿ ರೈಲ್ವೆ ಸಿಬ್ಬಂದಿಗಳ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ.
ವೃತ್ತಿ ನಿರ್ಲಕ್ಷ್ಯ ತೋರಿದ ಹಿನ್ನಲೆ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಆಗ್ನೇಯ ರೈಲ್ವೆ ಜಿಎಂ ಅನಿಲ್ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ.
ರೈಲ್ವೆ ನಿಲ್ದಾಣದಲ್ಲಿ ಸ್ಟೇಷನ್ ಮಾಸ್ಟರ್, ಟ್ರಾಫಿಕ್ ಇನ್ಸ್‌ಪೆಕ್ಟರ್ ಮತ್ತು ನಿರ್ವಾಹಕರ ರೈಲ್ವೆ ನಿಲ್ದಾಣದಲ್ಲಿ ಸ್ಟೇಷನ್ ಮಾಸ್ಟರ್, ಟ್ರಾಫಿಕ್ ಇನ್ಸ್‌ಪೆಕ್ಟರ್ ಮತ್ತು ನಿರ್ವಾಹಕ ಸಿಬ್ಬಂದಿಗಳು ಆ ಸಮಯದಲ್ಲಿ ಎಚ್ಚೆತ್ತುಕೊಂಡಿದ್ದರೆ ದೊಡ್ಡ ಅನಾಹುತ ತಪ್ಪಿಸಬಹುದಿತ್ತು ಎಂದು ಅನಿಲ್ ಕುಮಾರ್ ಮಿಶ್ರಾ ತಿಳಿಸಿದರು.
ಈ ದುರಂತಕ್ಕೆ ಸಂಬಂಧಪಟ್ಟಂತೆ ಹಿರಿಯ ಸೆಕ್ಷನ್ ಇಂಜಿನಿಯರ್ ಅರುಣ್ ಕುಮಾರ್ ಮಹಂತ, ಸೆಕ್ಷನ್ ಇಂಜಿನಿಯರ್ ಮೊಹಮ್ಮದ್ ಅಮೀರ್ ಖಾನ್ ಮತ್ತು ತಂತ್ರಜ್ಞ ಪಪ್ಪು ಕುಮಾರ್ ಅವರನ್ನು ಸಿಬಿಐ ಬಂಧಿಸಿತ್ತು. ಮೂವರನ್ನು ಇನ್ನೂ ಐದು ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಳ್ಳಲು ಸಿಬಿಐಗೆ ನ್ಯಾಯಾಲಯ ಅನುಮತಿ ನೀಡಿದೆ.
ಜೂನ್ 2 ರಂದು ನಡೆದ ಅಪಘಾತದಲ್ಲಿ 290 ಕ್ಕೂ ಹೆಚ್ಚು ಜನರು ಮೃತಪಟ್ಟು ಮತ್ತು 1000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.