ಮಳೆಗಾಗಿ ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ; ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿ
ಬೆಳಗಾವಿ;ರಾಜ್ಯದಲ್ಲಿ ಮುಂಗಾರು ಮಳೆ ಕುಂಠಿತವಾದ ಕಾರಣ ಮುಸ್ಲಿಮರು ಬೆಳಗಾವಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ಬಾರದ ಕಾರಣದಿಂದ ಬರಗಾಲದ ಭೀತಿ ಎದುರಾಗಿದೆ.
ಅಲ್ಲದೆ ರೈತರು ಕಂಗಾಲಾಗಿದ್ದು, ಕೃಷಿ ಚಟುವಟಿಕೆ ನಡೆಸಲು ಹಿಂದೇಟು ಹಾಕುವಂತಾಗಿದೆ. ಇದೀಗ ವಾಡಿಕೆಯಂತೆ ಮಳೆ ಬರಲು ಈದ್ಗಾ ಮೈದಾನದಲ್ಲಿ ಮುಸಲ್ಮಾನರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ.
ಮುಫ್ತಿ ಅಬ್ದುಲ್ ಅಜೀಜ್ ಖಾಜಿ ನೇತೃತ್ವದಲ್ಲಿ ಮಳೆಗಾಗಿ
ಬೆಳಗಾವಿಯ ಅಂಜುಮಾನ್ ಸಂಸ್ಥೆ ಬಳಿಯ ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥಿಸಲಾಗಿದೆ.
ಪ್ರಾರ್ಥನೆ ವೇಳೆ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು.ಮಳೆಗಾಗಿ ದೇವರ ಮೊರೆ ಹೋಗಿದ್ದಾರೆ.