ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ನಾಳೆ(ಜೂ.6) ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.6 ರವರೆಗೆ ರೆಡ್ ಅಲಟ್೯ ಘೋಷಣೆಯಾಗಿದೆ.
ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.