ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ; ನಾಳೆ(ಜೂ.5) ಶಾಲಾ , ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು; ದ.ಕ. ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಾಳೆ( ಜೂ.5) ರಂದು ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಕರಾವಳಿಯಲ್ಲಿ ಭಾರೀ ಮಳೆ ಹಿನ್ನೆಲೆ ಈಗಾಗಲೇ
ಇಂದು ಮಧ್ಯಾಹ್ನದಿಂದ ಜು.5 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.4ರ ಮಧ್ಯಾಹ್ನ ಬಳಿಕ ಮುಂದಿನ ಕೆಲವು ಗಂಟೆಗಳ ಕಾಲ ಬಲವಾದ ಮೇಲ್ಮೈ ಮಾರುತಗಳು ಬೀಸಲಿದೆ ಎನ್ನಲಾಗಿದೆ.

ಟಾಪ್ ನ್ಯೂಸ್