ರಾಜಸ್ಥಾನ;ಪ್ರಿಯತಮೆಯನ್ನು ಭೇಟಿ ಮಾಡಲು ಬಂದಿದ್ದ ಯುವಕನನ್ನು ಕಟ್ಟಿ ಹಾಕಿ ಆತನ ಬಾಯಿಗೆ ಗ್ರಾಮಸ್ಥರು ಮೂತ್ರ ಸುರಿದು ಥಳಿಸಿರುವ ಅಮಾನವೀಯ ಘಟನೆ
ರಾಜಸ್ಥಾನದ ಜಲೋರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.
ಬಾಲಕಿಯನ್ನು ಭೇಟಿ ಮಾಡಲು ಬಂದ ವ್ಯಕ್ತಿಯನ್ನು ಗ್ರಾಮಸ್ಥರು ಸೆರೆಹಿಡಿದು ವ್ಯಕ್ತಿಯನ್ನು ಮರಕ್ಕೆ ಕಟ್ಟಿ, ಥಳಿಸಿ, ಮೂತ್ರವನ್ನು ಬಾಯಿಗೆ ಸುರಿದಿದ್ದಾರೆ.
ಈ ಕುರಿತ ವಿಡಿಯೋ ವೈರಲ್ ಆಗಿದ್ದು,ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಬಂಧಿಸಿದ್ದಾರೆ.
ಯುವಕ ಭಾನುವಾರ ರಾತ್ರಿ ಸಮೀಪದ ಹಳ್ಳಿಯೊಂದರಲ್ಲಿ ಬಾಲಕಿಯನ್ನು ಭೇಟಿಯಾಗಲು ಬಂದಿದ್ದ. ನಂತರ ಗ್ರಾಮಸ್ಥರು ಮತ್ತು ಬಾಲಕಿಯ ಕುಟುಂಬಸ್ಥರು ಆತನನ್ನು ಹಿಡಿದು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ್ದಾರೆ.
ವಿಷಯ ತಿಳಿದ ನಂತರ ಆತನ ಕುಟುಂಬದ ಸದಸ್ಯರು ಘಟನಾ ಸ್ಥಳಕ್ಕೆ ಆಗಮಿಸಿ ಆತನನ್ನು ರಕ್ಷಿಸಿದ್ದಾರೆ.