ಮೈಸೂರು:ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗ ದಾನ ಮಾಡಿ ಕುಟುಂಬಸ್ಥರು ಇತರರಿಗೆ ಮಾದರಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಹೆಚ್.ಆರ್ ರಾಕೇಶ್(28) ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ.ರಾಕೇಶ್ ತಲೆ ತಿರುಗುವಿಕೆ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಜು.23ರ ಸೋಮವಾರದಂದು ರಾಕೇಶ್ ಅವರನ್ನು ತಲೆ ತಿರುಗುವಿಕೆ ಹಿನ್ನೆಲೆ ಇಲ್ಲಿನ ಅಪೋಲೊ ಬಿಜಿಎಸ್ ಆಸ್ಪತ್ರೆಗೆ ಕರೆತರಲಾಗಿತ್ತು.ರಾಕೇಶ್ ಅವರನ್ನು ತಪಾಸಣೆ ನಡೆಸಿದ ವೈದ್ಯರಿಗೆ ಸಿಟಿ ಸ್ಕ್ಯಾನ್ನಲ್ಲಿ ಮೆದುಳಿಗೆ ಗಂಭೀರ ಗಾಯವಾಗಿರುವುದು ಗೊತ್ತಾಗಿದೆ.ಬಳಿಕ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಜುಲೈ 29ರಂದು ಇವರ ಮೆದುಳು ನಿಷ್ಕ್ರಿಯಗೊಂಡಿದೆ.ಈ ಸಂಬಂಧ ಆಸ್ಪತ್ರೆಯ ವೈದ್ಯರು ಕುಟುಂಬಸ್ಥರಿಗೆ ತಿಳಿಸಿದ್ದು,ಅಂಗಾಂಗ ದಾನದ ಕುರಿತು ಸಮಾಲೋಚನೆ ನಡೆಸಿದ್ದಾರೆ.ಬಳಿಕ ಕುಟುಂಬಸ್ಥರು ಅಂಗಾಂಗ ದಾನ ಮಾಡಲು ನಿರ್ಧರಿಸಿದರು.
ರಾಕೇಶ್ ಅವರ 2 ಕಿಡ್ನಿಗಳು,1 ಲಿವರ್,ಹೃದಯ ಕವಾಟಗಳು ಮತ್ತು ಕಾರ್ನಿಯಾಗಳನ್ನು ದಾನ ಮಾಡಲಾಗಿದ್ದು, ಈ ಮೂಲಕ ಐವರ ಬಾಳಿಗೆ ಬೆಳಕಾಗಿದ್ದಾರೆ.