ಮುಸ್ಲಿಂ ಮಹಿಳೆಯರ ಜೊತೆ ‘ರಕ್ಷಾ ಬಂಧನ’ ಆಚರಿಸಲು ಎನ್‌ಡಿಎ ಸಂಸದರಿಗೆ ಪ್ರಧಾನಿ ಸಲಹೆ

ನವದೆಹಲಿ;ಮುಸ್ಲಿಂ ಮಹಿಳೆಯರ ಜೊತೆ ಈ ಬಾರಿಯ ರಕ್ಷಾ ಬಂಧನ ಹಬ್ಬವನ್ನು ಆಚರಿಸುವಂತೆ ಎನ್‌ಡಿಎ ಸಂಸದರಿಗೆ ಪ್ರಧಾನಿ ನರೆಂದ್ರ ಮೋದಿಯವರು ತಿಳಿಸಿದ್ದಾರೆ.

ಕಳೆದ ಸೋಮವಾರ ರಾತ್ರಿ ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಜಾರ್ಖಂಡ್‌ನ ಸೇರಿದಂತೆ ಒಟ್ಟು 338 ಎನ್‌ಡಿಎ ಸಂಸದರ ಜೊತೆಗಿನ ಸಭೆಯಲ್ಲಿ ಪ್ರಧಾನಮಂತ್ರಿಗಳು ಮಾತನಾಡಿ, ಸಮಾಜದ ಎಲ್ಲ ವರ್ಗಗಳೊಂದಿಗೆ ಸಂಪರ್ಕ ಸಾಧಿಸುವ ಅಗತ್ಯತೆ ಇದೆ. ಕಳೆದ ವಾರ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU) ಮಾಜಿ ಉಪಕುಲಪತಿ ತಾರಿಕ್ ಮನ್ಸೂರ್ ಅವರನ್ನು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಬಿಜೆಪಿ ಸರ್ಕಾರದ ತಲಾಖ್ ನೀರ್ಧಾರವು ಪಾಸ್ಮಾಂಡ ಮುಸ್ಲಿಮ್ ಮಹಿಳೆಯರನ್ನು ತಲುಪಿಸಲು ಒತ್ತು ನೀಡಬೇಕು ಎಂದು ಅವರು ಸಂಸದರಿಗೆ ಹೇಳಿದರು.

ತ್ರಿವಳಿ ತಲಾಖ್ ನ್ನು ನಿಷೇಧಿಸುವ ಮೂಲಕ ಕೇಂದ್ರ ಸರ್ಕಾರವು ಮುಸ್ಲಿಂ ಮಹಿಳೆಯರ ಪರವಾಗಿ ಉತ್ತೇಜನ ನೀಡುತ್ತದೆ.ಸಹೋದರ ಸಹೋದರಿಯರ ನಡುವಿನ ಬಾಂಧವ್ಯದ ಸಂಕೇತವಾದ ಈ ರಕ್ಷಾ ಬಂಧನ ಹಬ್ಬವು ಇದೇ ಆಗಸ್ಟ್ 30 ನಡೆಯಲಿದೆ.

ಈ ಹಬ್ಬದ ಸಂದರ್ಭದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ಕೆಲವು ಕಾರ್ಯಕ್ರಮ ಆಯೋಜಿಸಬೇಕಿದೆ ಎಂದು ಸಂಸದರು ಹೇಳಿದ್ದಾರೆ.

ಟಾಪ್ ನ್ಯೂಸ್