ಬೆಂಗಳೂರು;ಗ್ಯಾರೆಂಟಿ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.
ಈ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆಯನ್ನು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಕ್ತಿ ಯೋಜನೆ ನಿಲ್ಲಿಸಲಾಗುತ್ತದೆ ಎಂಬುದಾಗಿ ಕೆಲವರು ಊಹಾಪೋಹಗಳನ್ನು ಹಬ್ಬಿಸುತ್ತಿದ್ದಾರೆ.ಆದರೆ ಅದು ಸುಳ್ಳು. ಯಾವುದೇ ಮಹಿಳೆಯರು ಆತಂಕ, ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಇನ್ನೂ ರಾಜ್ಯದಲ್ಲಿ 10ವರ್ಷಗಳ ಕಾಲ ನಮ್ಮದೇ ಸರ್ಕಾರವಿರಲಿದೆ.10 ವರ್ಷಗಳ ಕಾಲವೂ ಶಕ್ತಿ ಯೋಜನೆ ಮುಂದುವರೆಯುತ್ತದೆ.ಮಹಿಳೆಯರು ಯಾರೂ ಕೂಡ ಪಾಸ್ ಪಡೆಯುವ ಅಗತ್ಯವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಶಕ್ತಿಯೋಜನೆ ಮುಂದುವರಿಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.