ಬಂಟ್ವಾಳ;ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಹಿನ್ನೆಲೆ
ಚುನಾವಣಾ ರಾಜಕೀಯದಿಂದ ಮಾಜಿ ಸಚಿವ ರಮಾನಾಥ ರೈ ನಿವೃತಿ ಘೋಷಿಸಿದ್ದಾರೆ.
ರಮಾನಾಥ ರೈ, ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವಿಗೆ ಶ್ರಮಿಸಿದ ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದ್ದರೂ ರಾಜ್ಯದಲ್ಲಿ ಪಕ್ಷದ ಅಭೂತಪೂರ್ವ ಗೆಲುವಿನ ಹಿನ್ನೆಲೆ ಕಾರ್ಯ ಕರ್ತರು ಎದೆಗುಂದದೆ ಕಾರ್ಯನಿರ್ವಹಿಬೇಕು. ಮುಂಬರುವ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ರಮಾನಾಥ ರೈ ಹೇಳಿದ್ದಾರೆ.
ಬಂಟ್ವಾಳದಲ್ಲಿ ಕಳೆದ ಬಾರಿಗಿಂತ ಈ ಬಾರಿ ನನಗೆ ಹೆಚ್ಚು ಮತಗಳು ಬಿದ್ದಿದ್ದರೂ ಸೋಲಾಗಿದೆ.ಸೋಲಿನ ಅವಲೋಕನ ನಡೆಸುತ್ತೇವೆ.ನಾನೆಂದೂ ಪಕ್ಷದ ಮಾತನ್ನು ಮೀರಿಲ್ಲ. ಇನ್ನು ಮುಂದೆಯೂ ಪಕ್ಷ ನೀಡುವ ಹೊಣೆಗಾರಿಕೆಯನ್ನು ನಿಷ್ಠೆಯಿಂದ ನಿಭಾಯಿಸುತ್ತೇನೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಗ್ಯಾರಂಟಿ ಯೋಜನೆ ಗಳನ್ನು ಶೀಘ್ರ ವಾಗಿ ಕಾಂಗ್ರೆಸ್ ಸರಕಾರ ಜಾರಿ ಮಾಡಲಿದೆ ಎಂದು ರಮಾನಾಥ ರೈ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿಯ ರಾಜೇಶ್ ನಾಯ್ಕ್ ವಿರುದ್ಧ ರಮಾನಾಥ ರೈ ಸತತ ಎರಡು ಬಾರಿ ಸೋಲನ್ನು ಕಂಡಿದ್ದಾರೆ.ಇದರಿಂದ ಚುನಾವಣಾ ರಾಜಕೀಯಕ್ಕೆ ನಿವೃತಿ ಘೋಷಿಸಿದ್ದಾರೆ.