ರಾಮನಗರ; ಬಸ್ & ಕಾರಿನ ನಡುವೆ ಭೀಕರ ಅಪಘಾತ, ಐವರು ಸ್ಥಳದಲ್ಲೇ ದುರ್ಮರಣ

ರಾಮನಗರ: ರಾಮನಗರ ಜಿಲ್ಲೆಯ ಕನಕಪುರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕ್ವಾಲಿಸ್ ಕಾರಿನ ನಡುವೆ ಭೀಕರ ಅಪಘಾತ ನಡೆದು ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.

ಅಪಘಾತದ ರಭಸಕ್ಕೆ ಕ್ವಾಲಿಸ್ ವಾಹನದಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್ ನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯವಾಗಿದೆ.

ಇನ್ನು ಕ್ವಾಲಿಸ್ ಕಾರಿನಲ್ಲಿದ್ದವರು ಮಹದೇಶ್ವರ ಬೆಟ್ಟದಿಂದ ವಾಪಾಸಾಗುತ್ತಿದ್ದರು ಎಂದು ವರದಿಯಾಗಿದೆ.

ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್